ಕರಾವಳಿ

ದುಬೈ, ಆಸ್ಟ್ರೇಲಿಯಾದಲ್ಲಿ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ರವಿ ಪೂಜಾರಿ ಪೊಲೀಸ್ ವಶಕ್ಕೆ

Pinterest LinkedIn Tumblr
ಬೆಂಗಳೂರುಮೋಸ್ಟ್ ವಾಂಟೆಂಡ್ ಭೂಗತ ಪಾತಕಿ ರವಿ ಪೂಜಾರಿಯನ್ನು ಸೆನೆಗಲ್ ದೇಶದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಬೆದರಿಕೆ, ಹಫ್ತಾ ವಸೂಲಿ ಸೇರಿದಂತೆ ಸುಮಾರು 60  ಪ್ರಕರಣಗಳಲ್ಲಿ ಭಾಗಿಯಾರುವ ರವಿ ಪೂಜಾರಿ ಸಿಸಿಬಿಯ ಹಿಟ್ ಲಿಸ್ಟ್​ನಲ್ಲಿ ಅಗ್ರ ಸಾಲಿನಲ್ಲಿದ್ದನೆನ್ನಲಾಗಿದೆ.

ರಿಮೋಟ್ ರೌಡಿಸಂ ನಡೆಸಿದ ಮೊದಲ ಭೂಗತ ಪಾತಕಿ ಎಂಬ ಕುಖ್ಯಾತಿ ಹೊಂದಿದ್ದ ರವಿ ಪೂಜಾರಿ ಕಳೆದ 15 ವರ್ಷದಿಂದ ದುಬೈ, ಆಸ್ಟ್ರೇಲಿಯಾದಲ್ಲಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ಗುರುವಾರ ಸೆನೆಗಲ್ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಭೂಗತವಾಗಿದ್ದುಕೊಂಡೇ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರವಿ ಪೂಜಾರಿ ಮೇಲೆ ಕರ್ನಾಟಕ, ಮಹಾರಾಷ್ಟ್ರ, ಕೇರಳ ಸೇರಿ ಹಲವೆಡೆ ಕೇಸ್ ದಾಖಲಾಗಿದ್ದವು.

Comments are closed.