ಕರಾವಳಿ

ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗಿನ ಮೆರವಣಿಗೆಗೆ ಶೀಘ್ರದಲ್ಲೇ ಬೀಳಲಿದೆ ಬ್ರೇಕ್..

Pinterest LinkedIn Tumblr

ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗಿನ ಮೆರವಣಿಗೆ ನಿಷೇಧಕ್ಕೆ ಚಿಂತನೆ : ಕಮಿಷನರ್

ಮಂಗಳೂರು ; ನಗರದಲ್ಲಿ ಹೆಚ್ಚುತ್ತಿರುವ ವಾಹನಗಳ ದಟ್ಟಣೆ ಹಾಗೂ ರಸ್ತೆಗಳ ಅಗಲೀಕರಣಕ್ಕೆ ಸ್ಥಳಾವಕಾಶದ ಕೊರತೆಯಿಂದಾಗಿ ಸಂಚಾರ ನಿರ್ವಹಣೆಗೆ ಅಡ್ಡಿಯಾಗುತ್ತಿದೆ.ಇಂತಹ ಪರಿಸ್ಥಿತಿಯಲ್ಲಿ ಮೆರವಣಿಗೆಗಳಿಂದ ಜನಸಾಮಾನ್ಯರ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ಅಂಬೇಡ್ಕರ್ ( ಜ್ಯೋತಿ) ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗಿನ ರಸ್ತೆಗಳಲ್ಲಿ ನಡೆಸಲಾಗುವ ಯಾವುದೇ ರೀತಿಯ ಮೆರವಣಿಗೆಗಳನ್ನು ನಿಷೇಧಿಸಲು ಚಿಂತನೆ ನಡೆಸಲಾಗಿದೆ ಎಂದು ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ತಿಳಿಸಿದ್ದಾರೆ.

ನಗರದಲ್ಲಿ ಅಸ್ತಿತ್ವದಲ್ಲಿರುವ ರಸ್ತೆಗಳನ್ನು ಅಗಲೀಕರಣಗೊಳಿಸಲು ಸಾಧ್ಯವಾಗುತ್ತಿಲ್ಲ. ಪ್ರತೀ ವರ್ಷ 1 ಲಕ್ಷ ವಾಹನಗಳು ನಗರ ಸಂಚಾರಕ್ಕೆ ಸೇರ್ಪಡೆಯಾಗುತ್ತಿವೆ. ಇದಕ್ಕೆ ಅನುಗುಣವಾಗಿ ರಸ್ತೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಇಂತಹ ವ್ಯವಸ್ಥೆಯಲ್ಲಿ ಆಗಾಗ್ಗೆ ಈ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಗಳಿಂದ ಜನಸಾಮಾನ್ಯರ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಎಂದು ಕಮಿಷನರ್ ತಿಳಿಸಿದ್ದಾರೆ.

ಇದೇ ವೇಳೆ ನಗರದ ನೆಹರೂ ಮೈದಾನದಲ್ಲಿ ಯಾವುದೇ ಸಮಾವೇಶ, ಕಾರ್ಯಕ್ರಮ, ಪ್ರತಿಭಟನೆಗಳನ್ನು ನಡೆಸುವ ವೇಳೆ ಅಲ್ಲಿನ ಎರಡು ಮೈದಾನ (ಫುಟ್ಬಾಲ್ ಮೈದಾನ ಸೇರಿ)ಗಳಲ್ಲಿ ಒಂದನ್ನು ಕಡ್ಡಾಯವಾಗಿ ಪಾರ್ಕಿಂಗ್ ವ್ಯವಸ್ಥೆಗೆ ಮೀಸಲಿಡುವ ನಿಯಮ ಅಳವಡಿಕೆಗೂ ಇಲಾಖೆ ಚಿಂತಿಸಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

Comments are closed.