ಕರಾವಳಿ

ರಾಜ್ಯ ಬಜೆಟ್‌ನಲ್ಲಿ ಕರಾವಳಿ ಭಾಗದ ನಿರ್ಲಕ್ಷ್ಯ : ಸಂಸದ ನಳಿನ್ ಕುಮಾರ್ ಕಟೀಲ್

Pinterest LinkedIn Tumblr

ಮಂಗಳೂರು : ಕರಾವಳಿ ಭಾಗವನ್ನು ಬಜೆಟ್‌ನಲ್ಲಿ ಸಂಪೂರ್ಣ ನಿರ್ಲಕ್ಷಿಸಲಾಗಿದೆ. ರಾಜ್ಯದ ಹಿತದೃಷ್ಟಿ ಇಲ್ಲದ ಈ ಬಜೆಟ್ ಬಗ್ಗೆ ಜನತೆಗೆ ಯಾವುದೇ ಭರವಸೆ ಇಲ್ಲ . ಬಜೆಟ್ ಪೂರ್ವಭಾವಿಯಾಗಿ ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ ಕೆಲವು ಭರವಸೆಗಳ ಬಗ್ಗೆಯೂ ಬಜೆಟ್‌ನಲ್ಲಿ ಯಾವುದೇ ಉಲ್ಲೇಖವಿಲ್ಲ ಎಂದು ದ.ಕ.ಸಂಸದ ನಳಿನ್‌ಕುಮಾರ್ ಕಟೀಲು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಈ ಹಿಂದೆ ಕರಾವಳಿ ಜಿಲ್ಲೆಗೆ ಬಜೆಟ್‌ನಲ್ಲಿ ಪ್ರಕಟಿಸಿದ ಯೋಜನೆಗಳು ಕೇವಲ ಘೋಷಣೆಗೆ ಸೀಮಿತವಾಗಿದೆ. ಇನ್ನು ಮೈತ್ರಿ ಸರ್ಕಾರದ ಸರದಿ. ಅಡಕೆ ಬೆಳೆಗಾರರನ್ನು ರಾಜ್ಯ ಸರ್ಕಾರ ಸಂಪೂರ್ಣ ಮರೆತಿದೆ. ಮೀನುಗಾರರಿಗೂ ಯಾವುದೇ ಯೋಜನೆ ಪ್ರಕಟಿಸಿಲ್ಲ. ರಾಜ್ಯದ ಇತರ ವಿಮಾನ ನಿಲ್ದಾಣಗಳ ಅಭಿವೃದ್ದಿ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ಸರ್ಕಾರ ಮಂಗಳೂರು ವಿಮಾನ ನಿಲ್ದಾಣವನ್ನು ಮರೆತಿದೆ ಎಂದು ಅವರು ತಿಳಿಸಿದ್ದಾರೆ.

Comments are closed.