ಕರಾವಳಿ

ಕೋಟ ಡಬಲ್ ಮರ್ಡರ್ ಕೇಸಿನ ಪ್ರಮುಖ ಆರೋಪಿ ಚಂದ್ರಶೇಖರ್ ರೆಡ್ಡಿ ಸಮೇತ ಇನ್ನೋರ್ವ ಬಂಧನ(Updated)

Pinterest LinkedIn Tumblr

ಉಡುಪಿ: ಕೋಟದ ಮಣೂರು ಗ್ರಾಮದ ಚಿಕ್ಕನಕೆರೆಯಲ್ಲಿ ಜ.26 ತಡರಾತ್ರಿ ನಡೆದ ಆಪ್ತಮಿತ್ರರಿಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಪೊಲೀಸರು ಇನ್ನಿಬ್ಬರನ್ನು ಬಂಧಿಸಿದ್ದು ಸದ್ಯ ಬಂಧಿತರ ಸಂಖ್ಯೆ 15 ಆಗಿದೆ.

ಮಣೂರು ಚಿಕ್ಕನಕೆರೆ ನಿವಾಸಿ ಚಂದ್ರಶೇಖರ ರೆಡ್ಡಿ (48), ಉಡುಪಿ ಬ್ರಹ್ಮಗಿರಿ ನಿವಾಸಿ ರತೀಶ್ ಎಂ. ಕರ್ಕೇರಾ (34) ಬಂಧಿತ ಆರೋಪಿಗಳು. ಆರೋಪಿ ಚಂದ್ರಶೇಖರ್ ರೆಡ್ಡಿ ರೌಡೀಶೀಟರ್ ಹಾಗೂ ಪ್ರಮುಖ ಆರೋಪಿಗಳಾದ ಹರೀಶ್ ರೆಡ್ಡಿ ಮತ್ತು ರಾಜಶೇಖರ್ ರೆಡ್ಡಿಯ ಹಿರಿಯ ಸಹೋದರನಾಗಿದ್ದು ಈತ ಪಿಕಪ್ ವಾಹನ ಹೊಂದಿದ್ದು ಚಾಲಕನಾಗಿದ್ದ. ರತೀಶ್ ವ್ಯವಹಾರ ಮಾಡಿಕೊಂಡಿದ್ದು ಪ್ರಮುಖ ಆರೋಪಿಗಳು ತಲೆಮರೆಸಿಕೊಳ್ಳಲು ಸಹಕಾರ ನೀಡಿದ್ದ ಎಂದು ಉಡುಪಿ ಎಸ್ಪಿ ಲಕ್ಷ್ಮಣ ನಿಂಬರಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

(ಚಂದ್ರಶೇಖರ ರೆಡ್ಡಿ , ರತೀಶ್ ಎಂ. ಕರ್ಕೇರಾ)

ಜ.26 ತಡರಾತ್ರಿ ಕೋಟ ಸಮೀಪ ನಡೆದ ಭರತ್ ಶ್ರೀಯಾನ್ ಮತ್ತು ಯತೀಶ್ ಕಾಂಚನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಪಂ ಬಿಜೆಪಿ ಸದಸ್ಯ ರಾಘವೇಂದ್ರ ಕಾಂಚನ್, ರೌಡಿಶೀಟರ್ ರಾಜಶೇಖರ ರೆಡ್ಡಿ, ಹರೀಶ್ ರೆಡ್ಡಿ, ಮಹೇಶ್ ಗಾಣಿಗ, ಮೆಡಿಕಲ್ ರವಿ, ರವಿಚಂದ್ರ ಪೂಜಾರಿಯನ್ನು ಮೊದಲಿಗೆ ಪೊಲೀಸರು ಬಂಧಿಸಿದ್ದು ಇವರೆಲ್ಲ ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಭಾನುವಾರ ಕೊಲೆ ಆರೋಪಿಗಳಿಗೆ ಸಹಕರಿಸಿದ ಆರೋಪದಲ್ಲಿ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಯಾದ ಪವನ್ ಅಮಿನ್ ಮತ್ತು ವೀರೇಂದ್ರ ಆಚಾರ್ಯ ಎಂಬವರನ್ನು ಬಂಧಿಸಿದ್ದರು. ಬಳಿಕ ಉಡುಪಿ ಪುತ್ತೂರು ಸುಬ್ರಹ್ಮಣ್ಯ ನಗರದ ಅಭಿಷೇಕ ಅಲಿಯಾಸ್ ಅಭಿ ಪಾಲನ್ (23), ಬಾರ್ಕೂರು ಹನೆಹಳ್ಳಿ ಗ್ರಾಮದ ಸಂತೋಷ್ ಕುಂದರ್ (35) ಬ್ರಹ್ಮಾವರ ನಿವಾಸಿ ನಾಗರಾಜ ಅಲಿಯಾಸ್ ರೊಟ್ಟಿ ನಾಗರಾಜ(44), ಭದ್ರಾವತಿ ನಿವಾಸಿ ಪ್ರಣವ್ ರಾವ್ (20) ಮತ್ತು ಅಂಜಾರು ನಿವಾಸಿ ಶಂಕರ ಮೊಗವೀರ(41) ಎನ್ನುವರನ್ನು ಬಂಧಿಸಲಾಗಿತ್ತು. ಈ ಎಲ್ಲಾ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

(ವರದಿ- ಯೋಗೀಶ್ ಕುಂಭಾಸಿ)

ಈ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದ ಸುದ್ದಿಗಳು-

ಕೋಟದಲ್ಲಿ ತಲವಾರು ದಾಳಿ: ಕ್ಷುಲ್ಲಕ ಕಾರಣಕ್ಕೆ ಹರಿಯಿತು ಇಬ್ಬರ ನೆತ್ತರು (Updated)

ಆಪ್ತಮಿತ್ರರಿಬ್ಬರ ಬರ್ಬರ ಕೊಲೆ ಪ್ರಕರಣ: ಕೋಟ ಹೆದ್ದಾರಿಯಲ್ಲಿ ಶವವಿಟ್ಟು ಪ್ರತಿಭಟನೆ (Video)

ಟಾಯ್ಲೆಟ್ ಪಿಟ್ ನಿರ್ಮಾಣದ ತಕರಾರು: ಆಪ್ತ ಮಿತ್ರರಿಬ್ಬರ ಮೇಲೆ ತಲವಾರು ಬೀಸಿದ ಹಂತಕರು

ಕೋಟ ಆಪ್ತಮಿತ್ರರನ್ನು ಕೊಂದ ಕೊಲೆಗಾರರ ಪತ್ತೆಗೆ ಚುರುಕುಗೊಂಡ ತನಿಖೆ

ಕೋಟದಲ್ಲಿ ಸ್ನೇಹಿತರಿಬ್ಬರ ಮರ್ಡರ್ ಕೇಸ್: ಆರೋಪಿಗಳಿಗಾಗಿ ಮುಂದುವರಿದ ಶೋಧ

ಕೋಟ ಅವಳಿ ಕೊಲೆ: ಹರೀಶ್ ರೆಡ್ಡಿ ಸಹಚರರು ಇನ್ನೂ ಭೂಗತ!

ಇನ್ನೂ ಪತ್ತೆಯಾಗದ ಕೊಲೆಗಾರರು; ನ್ಯಾಯಕ್ಕಾಗಿ ಆಗ್ರಹಿಸಿ ಫೆ.3ಕ್ಕೆ ಕೋಟ ಬಂದ್

ಕೋಟದಲ್ಲಿ ಅವಳಿ ಕೊಲೆ ಪ್ರಕರಣ: ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿ ಬಂದ್, ಪ್ರತಿಭಟನೆ (Video)

ಕೋಟ ಅವಳಿ ಕೊಲೆ ಪ್ರಕರಣದ ಆರೋಪಿಗಳ ಬಂಧನ? ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ ಅಂತೆಕಂತೆ!

ಕೋಟ ಡಬ್ಬಲ್ ಮರ್ಡರ್ ಕೇಸ್: ಇಬ್ಬರು ಆರೋಪಿಗಳ ಬಂಧನ

ಕೋಟ ಸ್ನೇಹಿತರ ಕೊಲೆಗೆ ಜಿ.ಪಂ ಸದಸ್ಯನೇ ಸೂತ್ರಧಾರಿ; ಪೊಲೀಸರಿಂದ 6 ಮಂದಿ ಬಂಧನ

ಕೋಟ ಅವಳಿ ಕೊಲೆಯ ಆರು ಆರೋಪಿಗಳಿಗೆ ಫೆ.15ರವರೆಗೆ ಪೊಲೀಸ್ ಕಸ್ಟಡಿ, ಮುಂದುವರಿಯಲಿದೆ ತನಿಖೆ

ಕೋಟ ಜೋಡಿ ಕೊಲೆ ಪ್ರಕರಣ ನಡೆದ ಮನೆಯಲ್ಲಿ ಮಹಜರು; ಕೃತ್ಯಕ್ಕೆ ಬಳಸಿದ್ದ 2 ಬೈಕ್ ವಶ

ಕೋಟ ಸ್ನೇಹಿತರಿಬ್ಬರ ಕೊಲೆ ಪ್ರಕರಣ: ರೆಡ್ಡಿಗೆ ಸಹಕರಿಸಿದ ಇಬ್ಬರು ಪೊಲೀಸರು ಅರೆಸ್ಟ್

ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡಿದ ಬಿಜೆಪಿಯವರಿಂದ ಕೊಲೆಗಡುಕರಿಗೆ ಬೆಂಬಲ: ಮಾಜಿ ಸಚಿವ ಸೊರಕೆ

ಕೋಟ ಸ್ನೇಹಿತರಿಬ್ಬರ ಕೊಲೆಯಲ್ಲಿ ಭಾಗಿಯಾದವನೂ ಸೇರಿ ಮತ್ತೆ ಐದು ಮಂದಿ ಬಂಧನ

ಕೋಟ ಜೋಡಿ ಕೊಲೆಗೆ ನ್ಯಾಯ ಕೇಳಿ ದೇವರ ಮೊರೆ ಹೋದವರಿಗೆ ಸಿಕ್ಕಿತು ಭರವಸೆಯ ನುಡಿ (Video)

Comments are closed.