ಕರಾವಳಿ

ನಾಳೆ ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ

Pinterest LinkedIn Tumblr

(ಕಡತ ಚಿತ್ರ)

ಮಂಗಳೂರು ಫೆಬ್ರವರಿ 14 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮಂಗಳೂರು ಮತ್ತು ಮಹಾನಗರ ಪಾಲಿಕೆ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಮೇಳ ಕಾರ್ಯಕ್ರಮವನ್ನು ಫೆಬ್ರವರಿ 15 ರಂದು ಪೂವಾಹ್ನ 10 ಗಂಟೆಗೆ ಜಿಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆ, ಕದ್ರಿಹಿಲ್ಸ್, ಮಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಸುಮಾರು 20ಕ್ಕಿಂತ ಹೆಚ್ಚು ಕಂಪೆನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿರುವರು.

ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಐ.ಟಿ.ಐ., ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ ವಿವರವುಳ್ಳ ಬಯೋಡಾಟಾ ಹಾಗೂ ಅಗತ್ಯ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು ದೂರವಾಣಿ ಸಂಖ್ಯೆ:0824-2457139ನ್ನು ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Comments are closed.