
ಮಂಗಳೂರು ಫೆಬ್ರವರಿ, 16 : ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ದ.ಕ ಜಿಲ್ಲಾ ಶಾಖೆಯ ವತಿಯಿಂದ ದೇಶಕ್ಕೋಸ್ಕರ ಪ್ರಾಣಾರ್ಪಣೈ ಗೈದು ಹುತಾತ್ಮರಾದ ಸೈನಿಕರ ಆತ್ಮಕ್ಕೆ ಚಿರಶಾಂತಿ ಕೋರಿ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು.
ದಕ್ಷಿಣ ಕನ್ನಡ ಮಾಜಿ ಸೈನಿಕರ ಸಂಘಟನೆಯ ಅಧ್ಯಕ್ಷ ಮಾಜಿ ಸೈನಿಕ ವಿಕ್ರಮ್ ದತ್ತ ಹಾಗೂ ರೆಡ್‍ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಹುತಾತ್ಮ ಯೋಧರ ಕುಟುಂಬಕ್ಕೆ ದೇವರು ದುಃಖವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲಿ ಹಾಗೂ ಅವರೊಂದಿಗೆ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ದ.ಕ ಜಿಲ್ಲಾ ಶಾಖೆಯ ಎಲ್ಲಾ ಸದಸ್ಯರು ಹಾಗೂ ದೇಶದ ಎಲ್ಲಾ ಪ್ರಜೆಗಳು ಅವರೊಂದಿಗೆ ಇರುವುದಾಗಿ ತಿಳಿಸಿದರು.
ಈ ಹೇಯ ಕೃತ್ಯಕ್ಕೆ ತಕ್ಕ ಪ್ರತ್ಯುತ್ತರ ನೀಡಬೇಕೆಂದು ರೆಡ್‍ಕ್ರಾಸ್ ಚೇರ್‍ಮೆನ್ ಸಿಎ. ಶಾಂತರಾಮ್ ಶೆಟ್ಟಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ದ.ಕ ಜಿಲ್ಲಾ ಶಾಖೆಯ ಗೌರವ ಕಾರ್ಯದರ್ಶಿ ಎಸ್.ಎ. ಪ್ರಭಾಕರ ಶರ್ಮ ಉಪಸ್ಥಿತರಿದ್ದರು.
Comments are closed.