ಕರಾವಳಿ

ಕೋಟ ಮರ್ಡರ್ ಕೇಸಿನ ಮೂವರು ಆರೋಪಿಗಳಿಗೆ ಜೈಲೋ? ಬೇಲೋ? ಫೆ.19 ಕ್ಕೆ ಆದೇಶ

Pinterest LinkedIn Tumblr

ಕುಂದಾಪುರ: ಕೋಟ ಸಮೀಪದ ಮಣೂರಿನಲ್ಲಿ ಜ.26 ರ ತಡರಾತ್ರಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ 16 ಆರೋಪಿಗಳ ಪೈಕಿ ಜಾಮೀನು ನೀಡುವಂತೆ ವಕೀಲರ ಮೂಲಕ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿರುವ ಮೂವರು ಆರೋಪಿಗಳಿಗೆ ಜಾಮೀನು ಅರ್ಜಿಯನ್ನು ವಜಾ ಮಾಡುವಂತೆ ಸಹಾಯಕ ಸರ್ಕಾರಿ ಅಭಿಯೋಜಕಿ ಸುಮಂಗಲ ನಾಯಕ್‌ ಶನಿವಾರ ವಾದ ಮಂಡಿಸಿದ್ದಾರೆ.

ಪ್ರಕರಣದಲ್ಲಿ ಆರೋಪಿಗಳಾಗಿರುವ ಡಿ.ಎ.ಆರ್
ಪೊಲೀಸ್‌ ಸಿಬ್ಬಂದಿಗಳಾದ ಪವನ್‌ ಅಮೀನ್‌, ವಿರೇಂದ್ರ ಆಚಾರ್ಯ ಹಾಗೂ ಕಾಲೇಜು ವಿದ್ಯಾರ್ಥಿ ಪ್ರಣವ್‌ ರಾವ್‌ ಎನ್ನುವರಿಗೆ ಜಾಮೀನು ನೀಡುವಂತೆ ಕುಂದಾಪುರದ ಹಿರಿಯ ನ್ಯಾಯವಾದಿ ರವಿಕಿರಣ್‌ ಮುರ್ಡೇಶ್ವರ ಶುಕ್ರವಾರ ಸಂಜೆ ಇಲ್ಲಿನ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿ ಕುರಿತು ವಾದ ಮಂಡಿಸಿದ್ದರು. ಪ್ರಾಸಿಕ್ಯೂಶನ್ ಪರ ವಕೀಲರಿಗೆ ವಾದ ಮಂಡನೆಗೆ ಶನಿವಾರ ಸಮಯ ನೀಡಲಾಗಿತ್ತು.

ಅಂತೆಯೇ ಶನಿವಾರ ಪ್ರಾಸಿಕ್ಯೂಶನ್‌ ಪರವಾಗಿ ವಾದ ಮಂಡನೆ ಮಾಡಿದ ಸುಮಂಗಲ ನಾಯಕ್‌ ಅವರು, ಪ್ರಕರಣದಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳಿಗೆ ಕೃತ್ಯ ನಡೆದ ಕೆಲವೇ ಸಮಯ, ಒಂದೆರಡು ದಿನಗಳ ಅಂತರದಲ್ಲಿ ವಿವಿಧ ರೀತಿಯಲ್ಲಿ ಈ ಮೂವರು ಆರೋಪಿಗಳೂ ಸಹಕಾರ ನೀಡಿರುವುದು ತನಿಖೆ ವೇಳೆ ತಿಳಿದುಬಂದಿದೆ. ಇದನ್ನೆಲ್ಲಾ ಗಮನಿಸಿದಾಗ ಆರೋಪಿಗಳು ಸಾಕ್ಷೀ ನಾಶ (ಸೆಕ್ಷನ್ 201) ಹಾಗೂ ಆರೋಪಿಗಳು ತಪ್ಪಿಸಿಕೊಳ್ಳಲು ಸಹಕರಿಸಿದ್ದಾರೆ (ಸೆಕ್ಷನ್ 212) ಎನ್ನುವ ಆರೋಪಗಳಿಗೆ ಮಾತ್ರ ಸೀಮಿತವಾಗಿಲ್ಲ. ಕೃತ್ಯದ ಒಳಸಂಚಿನಲ್ಲಿಯೂ ಭಾಗಿಯಾಗಿರುವ ಸಾಧ್ಯತೆಗಳಿವೆ. ಪ್ರಕರಣ ಇನ್ನೂ ಕೂಡ ತನಿಖೆಯ ಹಂತದಲ್ಲಿ ಇದೆ. ಪೂರ್ಣ ಪ್ರಮಾಣದ ತನಿಖೆ ನಡೆದು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ ಬಳಿಕವಷ್ಟೇ ಪ್ರಕರಣದಲ್ಲಿ ಈ ಮೂವರು ಆರೋಪಿತರ ಪಾತ್ರದ ಬಗ್ಗೆ ಸ್ಪಷ್ಟತೆ ಸಿಗಲಿದೆ. ಆದ್ದರಿಂದ ಜಾಮೀನು ಅರ್ಜಿಯನ್ನು ವಜಾ ಮಾಡುವಂತೆ ಮನವಿ ಮಾಡಿದರು.

ಆರೋಪಿಗಳ ಪರ ಹಾಗೂ ಪ್ರಾಸಿಕ್ಯೂಶನ್‌ ಪರವಾಗಿ ನಡೆದ ವಾದಗಳನ್ನು ಆಲಿಸಿದ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಕಾಂತ ಅವರು ಫೆ.19 ಕ್ಕೆ ಜಾಮೀನು ಅರ್ಜಿಯ ಮೇಲೆ ಆದೇಶ ನೀಡುವುದಾಗಿ ಪ್ರಕಟಿಸಿದ್ದಾರೆ.

ಈ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದ ಸುದ್ದಿಗಳು-

ಕೋಟದಲ್ಲಿ ತಲವಾರು ದಾಳಿ: ಕ್ಷುಲ್ಲಕ ಕಾರಣಕ್ಕೆ ಹರಿಯಿತು ಇಬ್ಬರ ನೆತ್ತರು (Updated)

ಆಪ್ತಮಿತ್ರರಿಬ್ಬರ ಬರ್ಬರ ಕೊಲೆ ಪ್ರಕರಣ: ಕೋಟ ಹೆದ್ದಾರಿಯಲ್ಲಿ ಶವವಿಟ್ಟು ಪ್ರತಿಭಟನೆ (Video)

ಟಾಯ್ಲೆಟ್ ಪಿಟ್ ನಿರ್ಮಾಣದ ತಕರಾರು: ಆಪ್ತ ಮಿತ್ರರಿಬ್ಬರ ಮೇಲೆ ತಲವಾರು ಬೀಸಿದ ಹಂತಕರು

ಕೋಟ ಆಪ್ತಮಿತ್ರರನ್ನು ಕೊಂದ ಕೊಲೆಗಾರರ ಪತ್ತೆಗೆ ಚುರುಕುಗೊಂಡ ತನಿಖೆ

ಕೋಟದಲ್ಲಿ ಸ್ನೇಹಿತರಿಬ್ಬರ ಮರ್ಡರ್ ಕೇಸ್: ಆರೋಪಿಗಳಿಗಾಗಿ ಮುಂದುವರಿದ ಶೋಧ

ಕೋಟ ಅವಳಿ ಕೊಲೆ: ಹರೀಶ್ ರೆಡ್ಡಿ ಸಹಚರರು ಇನ್ನೂ ಭೂಗತ!

ಇನ್ನೂ ಪತ್ತೆಯಾಗದ ಕೊಲೆಗಾರರು; ನ್ಯಾಯಕ್ಕಾಗಿ ಆಗ್ರಹಿಸಿ ಫೆ.3ಕ್ಕೆ ಕೋಟ ಬಂದ್

ಕೋಟದಲ್ಲಿ ಅವಳಿ ಕೊಲೆ ಪ್ರಕರಣ: ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿ ಬಂದ್, ಪ್ರತಿಭಟನೆ (Video)

ಕೋಟ ಅವಳಿ ಕೊಲೆ ಪ್ರಕರಣದ ಆರೋಪಿಗಳ ಬಂಧನ? ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ ಅಂತೆಕಂತೆ!

ಕೋಟ ಡಬ್ಬಲ್ ಮರ್ಡರ್ ಕೇಸ್: ಇಬ್ಬರು ಆರೋಪಿಗಳ ಬಂಧನ

ಕೋಟ ಸ್ನೇಹಿತರ ಕೊಲೆಗೆ ಜಿ.ಪಂ ಸದಸ್ಯನೇ ಸೂತ್ರಧಾರಿ; ಪೊಲೀಸರಿಂದ 6 ಮಂದಿ ಬಂಧನ

ಕೋಟ ಅವಳಿ ಕೊಲೆಯ ಆರು ಆರೋಪಿಗಳಿಗೆ ಫೆ.15ರವರೆಗೆ ಪೊಲೀಸ್ ಕಸ್ಟಡಿ, ಮುಂದುವರಿಯಲಿದೆ ತನಿಖೆ

ಕೋಟ ಜೋಡಿ ಕೊಲೆ ಪ್ರಕರಣ ನಡೆದ ಮನೆಯಲ್ಲಿ ಮಹಜರು; ಕೃತ್ಯಕ್ಕೆ ಬಳಸಿದ್ದ 2 ಬೈಕ್ ವಶ

ಕೋಟ ಸ್ನೇಹಿತರಿಬ್ಬರ ಕೊಲೆ ಪ್ರಕರಣ: ರೆಡ್ಡಿಗೆ ಸಹಕರಿಸಿದ ಇಬ್ಬರು ಪೊಲೀಸರು ಅರೆಸ್ಟ್

ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡಿದ ಬಿಜೆಪಿಯವರಿಂದ ಕೊಲೆಗಡುಕರಿಗೆ ಬೆಂಬಲ: ಮಾಜಿ ಸಚಿವ ಸೊರಕೆ

ಕೋಟ ಸ್ನೇಹಿತರಿಬ್ಬರ ಕೊಲೆಯಲ್ಲಿ ಭಾಗಿಯಾದವನೂ ಸೇರಿ ಮತ್ತೆ ಐದು ಮಂದಿ ಬಂಧನ

ಕೋಟ ಜೋಡಿ ಕೊಲೆಗೆ ನ್ಯಾಯ ಕೇಳಿ ದೇವರ ಮೊರೆ ಹೋದವರಿಗೆ ಸಿಕ್ಕಿತು ಭರವಸೆಯ ನುಡಿ (Video

ಕೋಟ ಡಬಲ್ ಮರ್ಡರ್ ಕೇಸಿನ ಪ್ರಮುಖ ಆರೋಪಿ ಚಂದ್ರಶೇಖರ್ ರೆಡ್ಡಿ ಸಮೇತ ಇನ್ನೋರ್ವ ಬಂಧನ(Updated)

ಕೋಟ ಡಬಲ್ ಮರ್ಡರ್ ಕೇಸಿನ 16 ಆರೋಪಿಗಳು ನ್ಯಾಯಾಲಯಕ್ಕೆ ಹಾಜರು: ಇಬ್ಬರಿಗೆ ಪೊಲೀಸ್ ಕಸ್ಟಡಿ (Video)

ಕೋಟ ಡಬಲ್ ಮರ್ಡರ್ ಆರೋಪಿ ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್ ಬಿಜೆಪಿಯಿಂದ  ಅಮಾನತು

Comments are closed.