ಕರಾವಳಿ

ಪುಲ್ವಾಮಾ ಘಟನೆಗೆ ಪ್ರಧಾನಿ ಮೋದಿ ತಕ್ಕ ಪ್ರತೀಕಾರ ಕೈಗೊಳ್ಳಲಿದ್ದಾರೆ ; ಸಂಸದ ನಳಿನ್ ಕುಮಾರ್

Pinterest LinkedIn Tumblr

ಮಂಗಳೂರು, ಫೆಬ್ರವರಿ.18: ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ದಾಳಿ ನಡೆಸಿದ ಭಯೋತ್ಪಾದಕನಿಗೆ ಪ್ರೇರಣೆ ನೀಡಿದ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಕೇಂದ್ರ ಸರಕಾರ ದಿಟ್ಟ ಕ್ರಮ ಕೈಗೊಳ್ಳುವ ಮೂಲಕ ಭಯೋತ್ಪಾದನೆಯನ್ನು ಮಟ್ಟ ಹಾಕಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯನ್ನು ಖಂಡಿಸಿ ಮತ್ತು ಭಯೋತ್ಪಾದನೆಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯ ಮುಂದೆ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಪುಲ್ವಾಮಾ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತಕ್ಕ ಪ್ರತೀಕಾರ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಪಾಕಿಸ್ತಾನ ಪರ ಘೋಷಣೆ, ಬರಹಗಳನ್ನು ಪ್ರಕಟಿಸುತ್ತಿರುವವರ ವಿರುದ್ಧ ಸರಕಾರ ಕಠಿಣ ಕ್ರಮಕೈಗೊಳ್ಳಲಾಗುವುದು. ಭಾರತೀಯ ಸೈನ್ಯಕ್ಕೆ ಪ್ರತಿಯೊಬ್ಬ ನಾಗರಿಕ ಬೆಂಬಲ ಮತ್ತು ಶಕ್ತಿ ತುಂಬಬೇಕು ಎಂದು ನಳಿನ್ ಕುಮಾರ್ ಹೇಳಿದರು.

ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಸಂಜೀವ ಮಠಂದೂರು, ಶಾಸಕರಾದ ಉಮಾನಾಥ ಕೋಟ್ಯಾನ್, ಎಸ್. ಅಂಗಾರ, ರಾಜೇಶ್ ನಾಯ್ಕ, ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮಾಜಿ ಶಾಸಕ ಎನ್. ಯೋಗೀಶ್ ಭಟ್, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ದ.ಕ.ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಮುಖಂಡರಾದ ಪ್ರತಾಪಸಿಂಹ ನಾಯಕ್, ನಿತಿನ್ ಕುಮಾರ್, ರವಿಶಂಕರ್ ಮಿಜಾರ್, ಜಿ.ಆನಂದ, ಪೂಜಾ ಪೈ, ಸಂಜಯ್ ಪ್ರಭು ಮುಂತಾದವರಿ ಈ ವೇಳೆ ಉಪಸ್ಥಿತರಿದ್ದರು.

Comments are closed.