ಕರಾವಳಿ

ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಸಂದೀಪ್ ಪಾಟೀಲ್ ಮಂಗಳೂರಿನ ನೂತನ ಪೊಲೀಸ್ ಕಮಿಷನರ್

Pinterest LinkedIn Tumblr

ಮಂಗಳೂರು, ಫೆಬ್ರವರಿ.21: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಪರ್ವ ಆರಂಭಗೊಂಡಿದೆ. ಐಪಿಎಸ್ ಅಧಿಕಾರಿಗಳ ಮೊದಲ ವರ್ಗಾವಣೆ ಪಟ್ಟಿ ಬಿಡುಗಡೆಯಾಗಿದ್ದು, ಮಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಸಂದೀಪ್ ಪಾಟೀಲ್ ಅವರನ್ನು ನಿಯುಕ್ತಿಗೊಳಿಸಲಾಗಿದೆ.

ಫೆ.20ರಿಂದಲೇ ಅನ್ವಯವಾಗುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಟಿ.ಆರ್.ಸುರೇಶ್ ಅವರನ್ನು ಬೆಂಗಳೂರಿಗೆ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ. ನಗರದ ನೂತನ ಪೊಲೀಸ್ ಅಯಕ್ತರಾಗಿ ಪೊಲೀಸ್ ಅಧಿಕಾರಿ ಸಂದೀಪ್ ಪಾಟಿಲ್ ಐಪಿಎಸ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.

ಟಿ.ಆರ್.ಸುರೇಶ್

2004 ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಸಂದೀಪ್ ಪಾಟೀಲ್ ಅವರು ಸದ್ಯ ಡಿಐಜಿ ಮತ್ತು ಬೆಂಗಳೂರು ಸಿಎಆರ್ ಯುನಿಟ್ಸ್‌ನ ಸಹಾಯಕ ಆಯುಕ್ತರಾಗಿದ್ದಾರೆ. ಇವರನ್ನಲ್ಲದೆ 30ರಷ್ಟು ಐಪಿಎಸ್ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಯಾಗುವಂತೆ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Comments are closed.