ಕರಾವಳಿ

ವಾರದಲ್ಲಿ ಮೂರು ದಿನ ಸಂಚರಿಸಲಿರುವ ಮಂಗಳೂರು-ಬೆಂಗಳೂರು ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

Pinterest LinkedIn Tumblr

ಮಂಗಳೂರು, ಫೆಬ್ರವರಿ.21: ನೈಋತ್ಯ ರೈಲ್ವೆ ಸಲ್ಲಿಸಿದ್ದ ಪ್ರಸ್ತಾವಕ್ಕೆ ಕೇಂದ್ರ ರೈಲ್ವೆ ಸಚಿವಾಲಯ ಒಪ್ಪಿಗೆ ನೀಡಿದ್ದು, ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಇಂದು ಹಸಿರು ನಿಶಾನೆ ತೋರಿಸಿದರು.

ಈ ಮೂಲಕ ಬೆಂಗಳೂರು-ಮಂಗಳೂರು ನಡುವೆ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಗುರುವಾರ ಚಾಲನೆ ಸಿಕ್ಕಿತ್ತು. ಬೆಂಗಳೂರಿನಿಂದ ಮಂಗಳೂರಿಗೆ ವಾರದಲ್ಲಿ ಮೂರು ದಿನ ಸಂಚರಿಸಲಿರುವ ಯಶವಂತಪುರ-ಮಂಗಳೂರು ಎಕ್ಸ್‌ಪ್ರೆಸ್ ರೈಲು ಶ್ರವಣಬೆಳಗೊಳ, ಹಾಸನ ಮಾರ್ಗವಾಗಿ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ತಲುಪಲಿದೆ.

ಇದೇ ಸಂದರ್ಭ ಕಬಕ ಪುತ್ತೂರು ನಿಲ್ದಾಣದಲ್ಲಿ ಪ್ಲಾಟ್ಫಾರಂ ವಿಸ್ತರಣೆ, ಬಂಟ್ವಾಳ ನಿಲ್ದಾಣದ ಪ್ಲಾಟ್‌ಫಾರಂ ವಿಸ್ತರಣೆ ಮತ್ತು ಸುಬ್ರಹ್ಮಣ್ಯ ನಿಲ್ದಾಣದಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು.

ಈ ವೇಳೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಭಾಸ್ಕರ ಕೆ., ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ನೈಋತ್ಯ ರೈಲ್ವೇ ವಿಭಾಗೀಯ ಪ್ರಬಂಧಕಿ ಅಪರ್ಣಾ ಗಾರ್ಗ್ ಮತ್ತಿತರರು ಉಪಸ್ಥಿತರಿದ್ದರು.

Comments are closed.