ಕರಾವಳಿ

ಡ್ರಗ್ಸ್ ಹಾವಳಿ ತಡೆಯುವುದರ ಜೊತೆಗೆ ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ; ನೂತನ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್

Pinterest LinkedIn Tumblr

ಮಂಗಳೂರು, ಫೆಬ್ರವರಿ. 22: ದ.ಕ.ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಆದ್ಯತೆ ನೀಡುವೆ, ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವೆ ಅಪರಾಧ ನಿಯಂತ್ರಣಕ್ಕೆ ಮತ್ತು ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡುವುದರೊಂದಿಗೆ ಡ್ರಗ್ಸ್ ಹಾವಳಿಯನ್ನು ತಡೆಯುವುದಾಗಿ ಮಂಗಳೂರಿನ ನೂತನ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಸಂದೀಪ್ ಪಾಟೀಲ್ ಅವರು ಮಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಶುಕ್ರವಾರ ಮಧ್ಯಾಹ್ನ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಪೊಲೀಸ್ ಆಯುಕ್ತರು‌ ಹಮ್ಮಿಕೊಂಡ ಯೋಜನೆಗಳನ್ನು ಮುಂದುವರಿಸುವೆ, ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಜನರು ಸಹಕಾರ ನೀಡಬೇಕು ಎಂದು ತಿಳಿಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಲಾಗಿದ್ದು, ಮಂಗಳೂರು ನಗರ ಪೊಲೀಸ್‌ ಆಯುಕ್ತರಾಗಿರುವ ಟಿ.ಆರ್‌. ಸುರೇಶ್‌ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್‌ ನೂತನ ಆಯುಕ್ತರಾಗಿ ಸಂದೀಪ್‌ ಪಾಟೀಲ್‌ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ.

ಮೂಲತಃ ಬೆಂಗಳೂರಿನ ನಿವಾಸಿಯಾಗಿರುವ ಸಂದೀಪ್‌ ಪಾಟೀಲ್‌ 2004ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿ. ದಾವಣಗೆರೆ, ಬೆಳಗಾವಿ, ಮಂಡ್ಯ ಮೊದಲಾದ ಕಡೆ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿ ಡಿಐಜಿ ಹುದ್ದೆಗೆ ಭಡ್ತಿ ಹೊಂದಿದ್ದರು. ಪ್ರಸ್ತುತ ಬೆಂಗಳೂರು ಸಿಎಆರ್‌ ಘಟಕದಲ್ಲಿ ಡಿಐಜಿ ಹಾಗೂ ಜಂಟಿ ಆಯುಕ್ತರಾಗಿದ್ದಾರೆ.

Comments are closed.