ಕರಾವಳಿ

ಉಡುಪಿ ನೂತನ ಎಸ್ಪಿಯಾಗಿ ನಿಶಾ ಜೇಮ್ಸ್ ಅಧಿಕಾರ ಸ್ವೀಕಾರ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ನಿಶಾ ಜೇಮ್ಸ್ ಶನಿವಾರ ಅಧಿಕಾರ ಸ್ವೀಕರಿಸಿದರು. ಉಡುಪಿಯ ಎಸ್ಪಿ ಕಚೇರಿಯಲ್ಲಿ ನಿರ್ಗಮನ ಎಸ್ಪಿ ಲಕ್ಷ್ಮಣ್ ನಿಂಬರ್ಗಿ ಅವರು ನೂತನ ಎಸ್ಪಿ ನಿಶಾ ಜೇಮ್ಸ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ನಿಶಾ ಜೇಮ್ಸ್ 2013ರ ಐಪಿಎಸ್ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ. 2012ರಲ್ಲಿ ಯುಪಿಎಸ್‌ಸಿ ಪರೀಕ್ಷೆ ಬರೆದಿದ್ದ ನಿಶಾ 179ನೇ ರ್‍ಯಾಂಕ್ ಪಡೆದು ಕರ್ನಾಟಕ ಕೇಡರ್‌ಗೆ ನಿಯುಕ್ತರಾಗಿದ್ದರು. ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಯಲ್ಲಿ ಎಎಸ್‌ಪಿ ಆಗಿದ್ದ ನಿಶಾ ಬೆಂಗಳೂರು ಗುಪ್ತಚರ, ರಾಯಚೂರು ಎಸ್‌ಪಿಯಾಗಿ ಕಾರ್ಯನಿರ್ವಹಿಸಿ ಕೆಎಸ್‌ಆರ್‌ಪಿ ಕಮಾಂಡೆಂಟ್ ಹುದ್ದೆಗೆ ವರ್ಗಗೊಂಡಿದ್ದರು. ಕೇರಳ ಮೂಲದ ಇವರು ದೆಹಲಿ ವಿಶ್ವವಿದ್ಯಾಲಯದಿಂದ ಎಂಎ ಇಂಗ್ಲಿಷ್​ ಸಾಹಿತ್ಯದ ವಿಷಯದಲ್ಲಿ ಪದವಿ ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಸ್ಪಿ ನಿಶಾ ಜೇಮ್ಸ್, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸೂಕ್ತ ಕ್ರಮಕೈಗೊಳ್ಳುವೆ. ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಲಾಗುತ್ತದೆ. ಫೋನ್ ಇನ್ ಕಾರ್ಯಕ್ರಮ ಸೇರಿದಂತೆ ಹಿಂದಿನ ಕೆಲಸಗಳು ಮುಂದುವರೆಯಲ್ಲಿದ್ದು ಜನಸ್ನೇಹಿ ಪೊಲೀಸ್ ವ್ಯವಸ್ಥೆ ನೀಡುವ ಗುರಿ ನಮ್ಮದು ಎಂದರು.

Comments are closed.