ಕರಾವಳಿ

ಉಗ್ರರ ತಾಣಗಳ ಮೇಲೆ ವಾಯುಸೇನೆ ದಾಳಿ : ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ವಿಜಯೋತ್ಸವ

Pinterest LinkedIn Tumblr

ಮಂಗಳೂರು : ಪುಲ್ವಾಮದಲ್ಲಿ ಉಗ್ರರು ನಡೆಸಿದ ದಾಳಿಗೆ ಪ್ರತಿಕಾರವಾಗಿ ಭಾರತೀಯ ವಾಯು ಸೇನೆಯ(ಐಎಎಫ್) 12 ಮಿರಾಜ್-2000 ಯುದ್ಧ ವಿಮಾನಗಳು ಮಂಗಳವಾರ ಬೆಳಗ್ಗಿನ ಜಾವ ಉಗ್ರರ ತಾಣಗಳ ಮೇಲೆ 1,000 ಕೆಜಿ ಬಾಂಬ್‌ಗಳ ದಾಳಿ ನಡೆಸಿರುವುದಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ಮಂಗಳವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಮುಂಭಾಗ ವಿಜಯೋತ್ಸವ ಆಚರಿಸಲಾಯಿತು.

ಉಗ್ರರ ದಾಳಿಗೆ 1,000 ಕೆಜಿ ಬಾಂಬ್‌ಗಳ ಮೂಲಕ ಭಯೋತ್ಪಾದಕರ ಶಿಬಿರಗಳ ಮೇಲೆ ವಾಯುಸೇನೆ ಪ್ರತಿದಾಳಿ ನಡೆಸಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡರು, ವೈರಿಗಳನ್ನು ಎದುರಿಸುವ ಶಕ್ತಿ ನಮ್ಮ ದೇಶದ ಜನರಲ್ಲಿದೆ ಎಂದು ಹೇಳಿದರು.

ಈ ವೇಳೆ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್, ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಹರೀಶ್‌ಕುಮಾರ್, ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ, ಮಾಜಿ ಸಚಿವ ರಮಾನಾಥ ರೈ, ಮೇಯರ್ ಭಾಸ್ಕರ್ ಕೆ., ಶಶಿಧರ್ ಹೆಗ್ಡೆ, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಡಿ.ಕೆ. ಅಶೋಕ್, ವಿನಯರಾಜ್, ಶಾಸಕಿ ಸೌಮ್ಯಾ ರೆಡ್ಡಿ, ಎಐಎಂಸಿ ಪ್ರಧಾನ ಕಾರ್ಯದರ್ಶಿಗಳಾದ ಅಪ್ಸರಾ ರೆಡ್ಡಿ, ಜೆನೆಟ್ ಡಿಸೋಜ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಜಿಪಂ ಸದಸ್ಯೆ ಮಮತಾ ಗಟ್ಟಿ, ಮಾಜಿ ಮೇಯರ್ ಕವಿತಾ ಸನೀಲ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೊ ಮತ್ತಿತರರು ಉಪಸ್ಥಿತರಿದ್ದರು.

Comments are closed.