
ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುವಾದ ಎಂಡಿಎಂಎನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಚೊಕ್ಕಬೆಟ್ಟು ನಿವಾಸಿ ಮಹಮ್ಮದ್ ಶಫಿಕ್ @ ಚಪ್ಪಿ (21) ಬಂಧಿತ ಆರೋಪಿ
ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (Methylene dioxy methamphetamine) MDMA ನ್ನು ಮುಂಬೈಯಿಂದ ಅಕ್ರಮವಾಗಿ ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಮಾಹಿತಿ ದೊರೆತ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಎಂಡಿಎಂಎ ಎಂಬ ಮಾದಕ ವಸ್ತುವನ್ನು ಹೊಂದಿದ ಆರೋಪಿಯನ್ನು ಸೊತ್ತು ಸಮೇತಾ ಬಂಧಿಸಿದ್ದಾರೆ.
ಆರೋಪಿ ವಶದಿಂದ 60 ಗ್ರಾಂ ತೂಕದ ರೂ. 1,80,000/- ಮೌಲ್ಯದ ಬೆಲೆಬಾಳುವ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಆರೋಪಿಯಿಂದ ಮೊಬೈಲ್ ಫೋನ್-1 ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಒಟ್ಟು ಮೌಲ್ಯ ರೂ. 1,83,000/-ಆಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮಾದಕ ವಸ್ತುವಿನ ಮಾರಾಟದ ಜಾಲದಲ್ಲಿ ಇನ್ನೂ ಇತರರು ಭಾಗಿಯಾಗಿದ್ದು,ಈ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿಯುವುದು. ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತುಗಳನ್ನು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ, ಪಿಎಸ್ಐ ಶ್ಯಾಮ್ ಸುಂದರ್, ಕಬ್ಬಾಳ್ ರಾಜ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
Comments are closed.