ಕರಾವಳಿ

ಸರ್ಜಿಕಲ್ ಸ್ಟ್ರೈಕ್ ಬಗ್ಗೆ ವಿಪಕ್ಷಗಳ ಲಘುವಾದ ಹೇಳಿಕೆ ಖಂಡನೀಯ : ಸಂಸದೆ ಮೀನಾಕ್ಷಿ ಲೇಖಿ

Pinterest LinkedIn Tumblr

ಮಂಗಳೂರು, ಮಾರ್ಚ್.04: ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆಯು ಇತ್ತೀಚೆಗೆ ನಡೆಸಿದ ಕಾರ್ಯಾಚರಣೆಯ ಬಗ್ಗೆ ವಿಪಕ್ಷಗಳು ಲಘುವಾಗಿ ಮಾತನಾಡುತ್ತಿರುವುದು ಖಂಡನೀಯ. ಉಗ್ರರ ನೆಲೆಗಳ ಮೇಲೆ ಭಾರತ ನಡೆಸಿದ ದಾಳಿಯನ್ನು ಬಿಜೆಪಿ ರಾಜಕೀಯಕ್ಕೆ ಬಳಸುತ್ತಿದೆ ಎಂಬ ನೆಲೆಯಲ್ಲಿ ವಿಪಕ್ಷಗಳು ಮಾತಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರೆ, ಸಂಸದೆ ಮೀನಾಕ್ಷಿ ಲೇಖಿ ಹೇಳಿದ್ದಾರೆ.

ರವಿವಾರ ನಗರದ ಸರ್ಕ್ಯೂಟ್‌ ಹೌಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುಲ್ವಾಮ ದಾಳಿ ನಡೆದಾಗ ಪ್ರಧಾನಿ ನರೇಂದ್ರ ಮೋದಿ ದೇಶದ ಜನರ ನಿರೀಕ್ಷೆಯಂತೆ ಪ್ರತಿಕ್ರಿಯಿಸಿದ್ದಾರೆ. ಆದರೆ ವಿಪಕ್ಷಗಳು ಕೇವಲ ಪ್ರಶ್ನೆ ಮಾಡುತ್ತಲೇ ಪ್ರಕರಣವನ್ನು ರಾಜಕೀಯಗೊಳಿಸುತ್ತಿವೆ ಎಂದು ಆರೋಪಿಸಿದರು.

ಸರ್ಜಿಕಲ್ ಸ್ಟ್ರೈಕ್ ಬಗ್ಗೆ ವಿಪಕ್ಷಗಳು ಸಾಕ್ಷಿ ಕೇಳುತ್ತಿವೆ. ಜೈಶ್ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥನ ಸಹೋದರನೇ ಭಾರತದ ದಾಳಿಯನ್ನು ಒಪ್ಪಿಕೊಂಡಿದ್ದಾನೆ. ಬಾಲ್‌ಕೋಟ್ ಧ್ವಂಸವಾಗಿದೆ ಎಂದು ಮಸೂರ್ ಅಝರ್ ತನ್ನ ಸಹಚರರಿಗೆ ಟ್ವೀಟ್ ಮಾಡಿರುವುದು ಮಾಧ್ಯಮಗಳಲ್ಲಿ ಬಹಿರಂಗವಾಗಿದೆ. ಇದುವೇ ಭಾರತೀಯ ಸೇನಾ ದಾಳಿಗೆ ಅತಿ ದೊಡ್ಡ ಸಾಕ್ಷಿಯಾಗಿದೆ ಎಂದು ಮೀನಾಕ್ಷಿ ಲೇಖಿ ನುಡಿದರು

ವಿರೋಧಿಗಳನ್ನು ಗೆದ್ದ ಸಂಭ್ರಮವನ್ನು ಆಚರಿಸಿದರೆ ಕೋಮು ಸಂಘರ್ಷದ ಸಾಧ್ಯತೆಯ ಬಗ್ಗೆ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹೇಳಿರುವುದು ನಾಚಿಕೆಗೇಡಿನ ವಿಷಯವಾಗಿದೆ. ಇಂತಹ ಹೇಳಿಕೆ ನೀಡುವ ಮೂಲಕ ಕುಮಾರಸ್ವಾಮಿ ದೇಶದ ಜನತೆಯ ಶಕ್ತಿಯನ್ನು ಕಡೆಗಣಿಸಿದ್ದಾರೆ ಎಂದು ಅವರು ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಗೀತಾಂಜಲಿ ಸುವರ್ಣ ಉಪಸ್ಥಿತರಿದ್ದರು.

Comments are closed.