ಕರಾವಳಿ

ಡಾ. ಸಂಧ್ಯಾ ಎಸ್. ಪೈ ಹಾಗೂ ಉರ್ಮಿಳಾ ರಮೇಶ್ ಕುಮಾರ್ ಅವರಿಗೆ ಅಬ್ಬಕ್ಕ ಪ್ರಶಸ್ತಿ ಪ್ರಧಾನ

Pinterest LinkedIn Tumblr

ಉಳ್ಳಾಲ, ಮಾರ್ಚ್. 04: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಉಳ್ಳಾಲ ಮೊಗವೀರಪಟ್ಣದ ಸಮುದ್ರತಟದಲ್ಲಿ ಎರಡು ದಿನಗಳಿಂದ ನಡೆಯುತ್ತಿದ್ದ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ-2019ರ ಸಮಾರೋಪ ಕಾರ್ಯಕ್ರಮದಲ್ಲಿ ಇಬ್ಬರು ಸಾಧಕರಿಗೆ ಅಬ್ಬಕ್ಕ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ತರಂಗ ವಾರಪ್ರತಿಕೆಯ ಸಂಪಾದಕಿ ಡಾ. ಸಂಧ್ಯಾ ಎಸ್. ಪೈ ಹಾಗೂ ಸಾಹಿತಿ, ಸಮಾಜ ಸೇವಕಿ ಉರ್ಮಿಳಾ ರಮೇಶ್ ಕುಮಾರ್ ಅವರಿಗೆ ಅಬ್ಬಕ್ಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಮಂಗಳೂರು ಸಹಾಯಕ ಆಯುಕ್ತ ರವಿಚಂದ್ರ ನಾಯಕ್ ಹಾಗೂ ಶ್ರೀಕಾಂತ್ ರಾವ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅಬಕ್ಕ ಪ್ರಶಸ್ತಿ ಪಡೆದ ಡಾ. ಸಂಧ್ಯಾ ಎಸ್. ಪೈ ಅವರು ಮಾತನಾಡಿ, ವೀರರಾಣಿ ಅಬ್ಬಕ್ಕಳ ಜೀವನ ಚರಿತ್ರೆ ಓದಿದಾಗ ಆಕೆಯ ತ್ಯಾಗ ಬಲಿದಾನದ ಕಥೆಗಳು ಇಂದಿಗೂ ಕಣ್ಣಲ್ಲಿ ನೀರು ಹರಿಸುತ್ತದೆ. ದೇಶಕ್ಕಾಗಿ ಬಲಿದಾನಗೈದ ಅಬ್ಬಕ್ಕಳ ನೆನಪನ್ನು ಸದಾ ಕಾಲ ಸ್ಮರಿಸಿಕೊಳ್ಳುವಂತೆ ಐನೂರು ವರ್ಷ ಕಳೆದರೂ ಅವಳ ನೆನೆಪು ಅಬ್ಬಕ್ಕ ಉತ್ಸವವಾಗಿ ಆಚರಿಸಿಕೊಂಡು ಬರಲಾಗುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

ಅಬಕ್ಕ ಪ್ರಶಸ್ತಿ ಪಡೆದ ಸಾಹಿತಿ, ಸಮಾಜ ಸೇವಕಿ ಉರ್ಮಿಳಾ ರಮೇಶ್ ಕುಮಾರ್ ಮಾತನಾಡಿ, ನನಗೆ ಪ್ರಶಸ್ತಿ ದೊರಕಲು ಕಾರಣಕರ್ತರಾದ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರ ಆಡಳಿತ ಮಂಡಳಿ, ಲಲಿಲಾ ಭಜನಾ ಮಂಡಳಿಗೆ ಅಭಿನಂದನೆಗಳು. ಹಾಗೆಯೇ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಪ್ರಶಸ್ತಿ ನೀಡಿ ಗೌರವಿಸಿದ ಸಂಬಂಧಿಸಿ ಕೆಲಸ ಮಾಡಿದ ಎಲ್ಲರಿಗೂ ಗೌರವ ಪ್ರಣಾಮಗಳು ಎಂದು ಹೇಳಿದರು.

ಉತ್ಸವ ಸಮಿತಿ ಸದಸ್ಯರುಗಳಾದ ಪಿ.ಡಿ. ಶೆಟ್ಟಿ ಹಾಗೂ ನಮಿತಾ ಶ್ಯಾಂ ಪ್ರಶಸ್ತಿ ಪತ್ರ ವಾಚಿಸಿದರು. ಜಿಲ್ಲಾ ಪಂ. ಸದಸ್ಯೆ ಮಮತಾ ಡಿ.ಎಸ್. ಗಟ್ಟಿ, ಬಂಟ್ವಾಳ ತಾಲೂಕು ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಉಪಸ್ಥಿತರಿದ್ದರು. ಭಾಸ್ಕರ ರೈ ಕುಕ್ಕುವಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮನೋಹರ್ ಪ್ರಸಾದ್ ಹಾಗೂ ಉಳ್ಳಾಲ ಮೊಗವೀರ ಸಂಘದ ಅಧ್ಯಕ್ಷ ಭರತ್ ಕುಮಾರ್ ಉಳ್ಳಾಲ್ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಜೇಶ್ ಬಿ. ವಂದಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Comments are closed.