ಕರಾವಳಿ

ಮಾಜಿ ಕೇಂದ್ರ ಸಚಿವ ಧನಂಜಯ ಕುಮಾರ್ ವಿಧಿವಶ

Pinterest LinkedIn Tumblr

ಮಂಗಳೂರು, ಮಾರ್ಚ್. 04: ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ, ಮಾಜಿ ಲೋಕಸಭಾ ಸದಸ್ಯ ಧನಂಜಯ ಕುಮಾರ್ (67 ವರ್ಷ) ಅವರು ಸೋಮವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಧನಂಜಯ ಕುಮಾರ್ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಮಂಗಳೂರು ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಧನಂಜಯ್ ಕುಮಾರ್ ಅವರು ಬಹುಅಂಗಾಂಗ ವೈಫಲ್ಯದಿಂದಾಗಿ ಕೆಲವು ತಿಂಗಳಿನಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕೋಮಕ್ಕೆ ಜಾರಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಮಂಗಳವಾರ ಬೆಳಗ್ಗೆ ‌7 ಗಂಟೆಯಿಂದ ‌10ರವರೆಗೆ ನಗರದ ಕದ್ರಿ‌ ಕಂಬಳದಲ್ಲಿ ಇರುವ ಅವರ ನಿವಾಸದಲ್ಲಿ ‌ಸಾರ್ವಜನಿಕರಿಗೆ‌ ಅಂತಿಮ ದರ್ಶನಕ್ಕೆ ಇಡಲಾಗುವುದು. ಬಳಿಕ ಹುಟ್ಟೂರಾದ ವೇಣೂರಿಗೆ ಅವರ ಮೃತ‌ದೇಹ ಕೊಂಡೊಯ್ದು ಅಂತಿಮ ಸಂಸ್ಕಾರ ಮಾಡಲಾಗುವುದು ಎಂದು ಮೂಲಗಳಿಂದ ತಿಳಿದು ಬಂದಿದೆ.

 ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆ : 

ದಕ್ಷಿಣ ಕನ್ನಡದ ವೇಣೂರಿನಲ್ಲಿ 1951 ಜುಲೈ 4ರಂದು ಜನಿಸಿದ್ದ ಧನಂಜಯ್ ಕುಮಾರ್ ಜನಿಸಿದ್ದರು. ಪದವಿ ಶಿಕ್ಷಣದ ನಂತರ ವಕೀಲರಾಗಿದ್ದರು. ಭಾರತೀಯ ಜನತಾ ಪಕ್ಷದ ವಿದ್ಯಾರ್ಥಿ ಘಟಕದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು. 1983ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. 1991ರಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿ.ಜನಾರ್ದನ ಪೂಜಾರಿ ಅವರನ್ನು ಸೋಲಿಸಿ ಸಂಸದರಾಗಿ ಆಯ್ಕೆಯಾಗಿದ್ದರು.

ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಧನಂಜಯ್ ಕುಮಾರ್ 1996ರಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾಗಿ, 1999ರಲ್ಲಿ ಕೇಂದ್ರದ ಹಣಕಾಸು ಖಾತೆ ರಾಜ್ಯ ಸಚಿವರಾಗಿ, 2000ರಲ್ಲಿ ಕೇಂದ್ರದ ಜವಳಿ ಖಾತೆ ರಾಜ್ಯ ಸಚಿವರಾಗಿದ್ದರು.

ಧನಂಜಯ್ ಕುಮಾರ್ ಅವರು ಬಿಎಸ್ ಯಡಿಯೂರಪ್ಪನವರ ಕಟ್ಟಾ ಬೆಂಬಲಿಗರಾಗಿದ್ದರು. ಬಿಎಸ್ ವೈ ಕೆಜೆಪಿ ಸ್ಥಾಪಿಸಿದಾಗ ಅವರಿಗೆ ಸಾಥ್ ನೀಡಿದ್ದರು. ಬಳಿಕ ಯಡಿಯೂರಪ್ಪ ಬಿಜೆಪಿಗೆ ವಾಪಸ್ ಆದ ಬಳಿಕ ಧನಂಜಯ್ ಕುಮಾರ್ ಅವರು ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡಿದ್ದರು.

ತೀರಾ ಅನಾರೋಗ್ಯ ಹಿನ್ನೆಲೆ : ಮಾಜಿ ಕೇಂದ್ರ ಸಚಿವ ವಿ.ಧನಂಜಯ ಕುಮಾರ್ ಈಗ ಕೋಮದಲ್ಲಿ…

 

Comments are closed.