ಕರಾವಳಿ

ನಾಳೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮಂಗಳೂರಿಗೆ…

Pinterest LinkedIn Tumblr

ಮಂಗಳೂರು, ಮಾರ್ಚ್ 08: ಮುಂಬರುವ ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಬಿರುಸಿನ ಚಟುವಟಿಕೆ ಆರಂಭಿಸಿದ್ದು, ಇದೇ ವೇಳೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ನಾಳೆ ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ವಿಧಾನಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಅವರು, ಮಾರ್ಚ್ 9ರಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಮಂಗಳೂರಿಗೆ ಆಗಮಿಸಲಿದ್ದು, ನಗರದ ಕೇಂದ್ರ ಮೈದಾನದಲ್ಲಿ ಏರ್ಪಡಿಸಿರುವ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಒಳಗೊಂಡ ಬಿಜೆಪಿ ಕ್ಲಸ್ಟರ್‌ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ,ಮಾತನಾಡಲಿದ್ದಾರೆ ಎಂದು ಹೇಳಿದರು.

ಪ್ರಮುಖರು, ಸಹ ಪ್ರಮುಖರು, ಬೂತ್‌ ಮಟ್ಟದ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ಪ್ರಭಾರಿಗಳು, ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ರಾಜ್ಯದ ಚುನಾಯಿತ ಜನಪ್ರತಿನಿಧಿಗಳು, ಕಾರ್ಯಕಾರಿಣಿ ಸದಸ್ಯರು, ರಾಜ್ಯ ಬಿಜೆಪಿ ನಾಯಕರು ಸಹಿತ ಸುಮಾರು 10 ಸಾವಿರ ಮಂದಿ ಈ ಕ್ಲಸ್ಟರ್‌ ಮಟ್ಟದ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ನಂತರ ನಗರದ ಡಾ ಟಿ.ಎಂ.ಎ. ಪೈ ಸಭಾಂಗಣದಲ್ಲಿ ಏರ್ಪಡಿಲಾಗಿರುವ ಇಂಟೆಲೆಕ್ಚುವಲ್ ಮೀಟ್‌ ನಲ್ಲಿ ರಾಜನಾಥ್ ಸಿಂಗ್‌ ಪಾಲ್ಗೊಳ್ಳಲಿದ್ದಾರೆ ಎಂದು ಮೋನಪ್ಪ ಭಂಡಾರಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಮುಖರಾದ ಸತೀಶ್ ಪ್ರಭು, ಸಂಜಯ್ ಪ್ರಭು ಉಪಸ್ಥಿತರಿದ್ದರು.

Comments are closed.