ಕರಾವಳಿ

75 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ ಕೋಟ ಪೊಲೀಸ್ ಠಾಣೆಯ ನೂತನ ಕಟ್ಟಡ

Pinterest LinkedIn Tumblr

ಉಡುಪಿ: ಅಂದಾಜು 75 ಲಕ್ಷ ವೆಚ್ಚದಲ್ಲಿ ಉಡುಪಿ‌ ಜಿಲ್ಲೆಯ ಕೋಟ ಪೊಲೀಸ್ ಠಾಣೆ ನೂತನ ಕಟ್ಟಡ ನಿರ್ಮಾಣಗೊಳ್ಳಲಿದೆ.

ಈ ಶಿಲಾನ್ಯಾಸ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ನೀಶಾ ಜೇಮ್ಸ್ ಅವರು ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಪೊಲೀಸ್ ಉಪಾಧೀಕ್ಷಕ ಟಿ.ಆರ್ ಜೈಶಂಕರ್, ಬ್ರಹ್ಮಾವರ ವೃತ್ತ ನಿರೀಕ್ಷಕ ಪೂವಯ್ಯ, ಬ್ರಹ್ಮಾವರ ಪಿಎಸ್ಐ ರಾಘವೇಂದ್ರ ಸಿ ಹಾಗೂ ಇಂಜಿನಿಯರ್ ಸಂತೋಷ್ ಕುಮಾರ್ ರೈ, ಗುತ್ತಿಗೆದಾರ ಪ್ರಮೋದ್ ಕುಮಾರ್ ಶೆಟ್ಟಿ, ಸಾಮಾಜಿಕ ಹೋರಾಟಗಾರ ಗಿರೀಶ್ ನಾಯಕ್, ಪೊಲೀಸ್ ಠಾಣೆ ಸಿಬ್ಬಂದಿಗಳು ಮೊದಲಾವರಿದ್ದರು.

ಕೋಟಕ್ಕೆ ನೂತನ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣ ಬಗ್ಗೆ ಈ ಹಿಂದೆಯೇ ಪ್ರಸ್ತಾಪಗಳು ಬಂದಿತ್ತು. ಜಿಲ್ಲೆಯಲ್ಲೇ ದೊಡ್ಡ ವ್ಯಾಪ್ತಿ ಹೊಂದಿರುವ ಠಾಣೆಗಳಲ್ಲಿ ಒಂದಾದ ಕೋಟ ಪೊಲೀಸ್ ಠಾಣೆ ಇದೀಗ ಸುಸಜ್ಜಿತ ಕಟ್ಟಡದಲ್ಲಿ ಕೆಲವಾರು ತಿಂಗಳಲ್ಲಿ ಉದ್ಘಾಟನೆಗೊಳ್ಳಲಿದೆ. ಕೋಟ ಪೊಲೀಸ್ ಠಾಣೆ ಸುಮಾರು 30 ಗ್ರಾಮಗಳನ್ನು ಹೊಂದಿದೆ.

(ವರದಿ- ಯೋಗೀಶ್ ಕುಂಭಾಸಿ)

Comments are closed.