ಕರಾವಳಿ

ಲೋಕಸಭಾ ಚುನಾವಣೆ ಹಿನ್ನೆಲೆ : ನಕ್ಷಲ್ ಪೀಡಿತ ಪ್ರದೇಶ ಸೇರಿದಂತೆ ಜಿಲ್ಲಾದ್ಯಂತ ವ್ಯಾಪಕ ಬಂದೋಬಸ್ತ್

Pinterest LinkedIn Tumblr

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಪ್ರಿಲ್ 18ರಂದು ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಶಾಂತಿಯುತ, ಪಾರದರ್ಶಕ ಚುನಾವಣೆಗೆ ಇಲಾಖೆಯು ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲೆಯಲ್ಲಿ 46 ನಕ್ಸಲ್ ಬೂತ್‌ಗಳನ್ನು ಗುರುತಿಸಲಾಗಿದ್ದು, ಈ ಪ್ರದೇಶಗಳಲ್ಲಿ ಕೇಂದ್ರ ಅರೆಸೇನಾ ಪಡೆಗಳನ್ನು ನಿಯೋಜಿಸುವ ಮೂಲಕ ಚುನಾವಣಾ ಪ್ರಕ್ರಿಯೆಗಳು ಶಾಂತಿಯುತ ಹಾಗೂ ಪಾರದರ್ಶಕವಾಗಿ ನೆರವೇರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 9,621 ಮಂದಿ ಶಸ್ತ್ರಾಸ್ತ್ರ ಪರವಾನಿಗೆದಾರರಿದ್ದು, ಅವರು ಇದನ್ನು ಸಮೀಪದ ಠಾಣೆಗಳಲ್ಲಿ ಠೇವಣಿಯಿರಿಸಬೇಕು. ಅಥವಾ ತಮ್ಮ ವೆಂಡರ್ ಬಳಿಯೂ ಜಿಲ್ಲಾಧಿಕಾರಿ ಅನುಮತಿ ಮೇರೆಗೆ ಠೇವಣಿ ಇರಿಸಬಹುದು. ಜನಸಾಮಾನ್ಯ ರಲ್ಲಿ ಧೈರ್ಯ ತುಂಬುವ ದೃಷ್ಟಿಯಿಂದ ಚುನಾವಣಾ ಪ್ರಕ್ರಿಯೆಗೆ ಧಕ್ಕೆ ತರುವವರ ಮೇಲೆ ಸ್ವಯಂ ಪ್ರೇರಿತವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದವರು ಸ್ಪಷ್ಟಪಡಿಸಿದರು.

Comments are closed.