ಕರಾವಳಿ

ಚುನಾವಣಾ ಸಂದರ್ಭ ಶಾಂತಿ ಭಂಗ ಸಾಧ್ಯತೆ : ಪರವಾನಿಗೆ ಹೊಂದಿರದ ಶಸ್ತ್ರಾಸ್ತ್ರಗಳಿಗೆ ನಿಷೇಧ

Pinterest LinkedIn Tumblr

ಮಂಗಳೂರು ಮಾರ್ಚ್ 12 : ಭಾರತ ಚುನಾವಣಾ ಆಯೋಗವು ಕರ್ನಾಟಕ ರಾಜ್ಯ ಲೋಕಸಭಾ ಸಾರ್ವತ್ರಿಕ ಚುನಾವಣಾ ವೇಳಾಪಟ್ಟಿಯನ್ನು ದಿನಾಂಕ 10-3-2019 ರಂದು ಪ್ರಕಟಿಸಿದ್ದು ಚುನಾವಣಾ ನೀತಿ ಸಂಹಿತೆಯು ಸದ್ರಿ ದಿನಾಂಕದಿಂದ ಜಾರಿಯಲ್ಲಿರುತ್ತದೆ. ಚುನಾವಣೆ ಸಂದರ್ಭದಲ್ಲಿ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವುದನ್ನು ಖಾತರಿಪಡಿಸಲು ಚುನಾವಣಾ ಆಯೋಗವು ಮಾರ್ಗಸೂಚಿ ಮತ್ತು ಆದೇಶಗಳನ್ನು ಹೊರಡಿಸಿರುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳು ಕೋಮು ಸೂಕ್ಷ್ಮ ಪ್ರದೇಶಗಳಾಗಿರುವುದರಿಂದ ಸಮಾಜ ಘಾತುಕ ಶಕ್ತಿಗಳು ಶಾಂತಿ ಭಂಗವನ್ನು ಉಂಟು ಮಾಡುವ ಸಾಧ್ಯತೆಗಳಿದ್ದು ಅಹಿತಕರ ಘಟನೆಗಳು ಉಂಟಾಗುವ ಸಂಭವಗಳಿರುವುದರಿಂದ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವನ್ನು ತೆಗೆದುಕೊಳ್ಳುವುದು ಅತೀ ಅವಶ್ಯವಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಾಗೂ ಶಾಂತ ಮತ್ತು ಮುಕ್ತ ಮತದಾನಕ್ಕೆ ಅವಕಾಶ ಕಲ್ಪಿಸುವ ಅಗತ್ಯತೆ ಇರುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಚುನಾವಣೆ ವೇಳೆ ಪರವಾನಿಗೆ ಹೊಂದಿರದ ಶಸ್ತ್ರಾಸ್ತ್ರ ಗಳನ್ನು ಹೊಂದಲು/ ಕೊಂಡು ಹೋಗುವುದನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಂತೆ ನಿಷೇಧಿಸಿ ಆದೇಶಿಸಿದೆ. ಈ ಆದೇಶವು ಸರಕಾರದಿಂದ ಕರ್ತವ್ಯದಲ್ಲಿ ನಿರತರಾಗಿರುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಇವರು ಆದೇಶಿಸಿದ್ದಾರೆ.

Comments are closed.