ಕರಾವಳಿ

ಮಂಗಳೂರಿನಲ್ಲಿ ಪಬ್ ಮಾಲಕರಿಗೆ ಎಚ್ಚರಿಕೆ ನೀಡಿದ ಸಂದೀಪ್ ಪಾಟೀಲ್

Pinterest LinkedIn Tumblr

ಮಂಗಳೂರು,ಮಾರ್ಚ್ 14 ಮಂಗಳೂರು ನಗರ ವ್ಯಾಪ್ತಿಯಲ್ಲಿರುವ ಎಲ್ಲ ಪಬ್‌ಗಳನ್ನು ಲೈಸನ್ಸ್ ಪ್ರಕಾರ ಸರ್ಕಾರ ನಿಗದಿಪಡಿಸಿದ ಸಮಯದೊಳಗೆ ಮುಚ್ಚುವಂತೆ ಹಾಗೂ ಪಬ್ ಒಳಗಡೆ ಮತ್ತು ಹೊರಗಡೆ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಆಳವಡಿಸುವಂತೆ ಪಬ್ ಮಾಲಕರಿಗೆ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಸೂಚನೆ ನೀಡಿದ್ದಾರೆ.

ಮಂಗಳೂರು ನಗರದಲ್ಲಿ ಸಮಯ ಮೀರಿ ಪಬ್‌ಗಳನ್ನು ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಪಬ್‌ಗಳಲ್ಲಿ ಕುಡಿದು ಗಲಾಟೆ ಮಾಡಿಂತಹ ಘಟನೆಗಳ ಈ ಹಿಂದೆ ನಡೆದಿವೆ. ಇದನ್ನೆಲ್ಲ ಕಡಿವಾಣ ಹಾಕಲು ಪಬ್ ಮಾಲಕರಿಗೆ ಕಾನೂನು ಪ್ರಕಾರ ನಡೆದುಕೊಂಡು ಹೋಗುವಂತೆ ಸಭೆ ಕರೆದು ಎಚ್ಚರಿಕೆ ನೀಡಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಮಾತ್ರವಲ್ಲದೇ ಪಬ್ ಗಳಲ್ಲಿ ಡ್ರಗ್ಸ್ ಸೇವನೆ ಆಗದಂತೆ ನೋಡಿಕೊಳ್ಳಬೇಕು ಹಾಗೂ ಮಹಿಳೆಯರ ಸುರಕ್ಷೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಪಬ್ ಮಾಲಕರಿಗೆ ಸೂಚನೆ ನೀಡಲಾಗಿದೆ. ಮುಖ್ಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಒಳಗೆ ಹಾಗೂ ಹೊರಭಾಗದಲ್ಲಿ ಅಳವಡಿಸಬೇಕು ಎಂದು ಪಬ್ ಮಾಲಕರಿಗೆ ಸೂಚನೆ ನೀಡಲಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.

ಪರವಾನಿಗೆಯಂತೆ ರಾತ್ರಿ 11:30ಕ್ಕೆ ಪಬ್‌ಗಳನ್ನು ಬಂದ್ ಮಾಡಲು ನಿರ್ದೇಶನ ನೀಡಲಾಗಿದೆ. ಅಲ್ಲದೆ, ಪಬ್‌ಗಳಲ್ಲಿ ಮಾದಕ ದ್ರವ್ಯ, ಅನೈತಿಕ ಚಟುವಟಿಕೆಗಳು ನಡೆಯದಂತೆ ಪಬ್ ಮಾಲಕರು ಜವಾಬ್ದಾರಿ ವಹಿಸಿಕೊಳ್ಳಬೇಕು. ಒಂದು ವೇಳೆ ಪೊಲೀಸರ ದಾಳಿ ವೇಳೆ ಯಾವುದೇ ಮಾದಕ ದ್ರವ್ಯ ಸಿಕ್ಕಿದ್ದೇ ಆದಲ್ಲಿ ಪಬ್ ಮಾಲಕರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಕಮಿಷನರ್ ತಿಳಿಸಿದ್ದಾರೆ.

ಪಬ್‌ಗಳಲ್ಲಿ ಕೆಲವೆಡೆ ಬೌನ್ಸರ್ ಗಳನ್ನು ಇಡಲಾಗಿದೆ. ಅಂತಹವರೇ ಕಾನೂನನ್ನು ಕೈಗೆತ್ತಿಕೊಂಡು ಜನರ ಮೇಲೆ ಹಲ್ಲೆ ನಡೆಸಿದ ಘಟನೆಗಳು ಈ ಹಿಂದೆ ನಡೆದಿವೆ.ಇಂತಹ ಬೌನ್ಸರ್‌ಗಳ ಕ್ರಿಮಿನಲ್ ಹಿನ್ನೆಲೆಯನ್ನು ಪರಿಶೀಲಿಸಲಾಗುವುದು. ಅದೇ ರೀತಿ ಕುಡಿದು ವಾಹನ ಚಲಾಯಿಸುವವರ ವಿರುದ್ದ ಕ್ರಮ ಜರಗಿಸಬೇಕು ಎಂದು ಸಾರ್ವಜನಿಕರಿಂದ ಅನೇಕ ದೂರುಗಳು ಬರುತ್ತಿದೆ. ಈ ಬಗ್ಗೆ ಕೂಡ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.

Comments are closed.