ಕರಾವಳಿ

ಮತದಾರರಲ್ಲಿ ಜಾಗೃತಿ ಮೂಡಿಸಲು ಮತದಾನ ಜಾಗೃತಿ ರಥ ; ದ.ಕ. ಜಿಲ್ಲಾಧಿಕಾರಿಗಳಿಂದ ಚಾಲನೆ

Pinterest LinkedIn Tumblr

ಮಂಗಳೂರು, ಮಾರ್ಚ್.16: ದ.ಕ. ಜಿಲ್ಲಾಡಳಿತ ಹಾಗೂ ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಮತದಾನ ಜಾಗೃತಿ ರಥವನ್ನು ಆರಂಭಿಸಲಾಗಿದೆ.

ಜಾಗೃತಿ ರಥವನ್ನು ಶನಿವಾರ ಸಂಜೆ ದ.ಕ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಈ ವಾಹನವು ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 30 ದಿನಗಳ ಕಾಲ ಸಂಚರಿಸಲಿದೆ. ಸಾರ್ವಜನಿಕರಿಗೆ ಮತದಾನದ ಅರಿವು ಮೂಡಿಸುವ ಜೊತೆಗೆ ಮತದಾನ ಪಟ್ಟಿಯಲ್ಲಿ ಮತದಾರರ ಹೆಸರಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತದೆ ಎಂದರು.

ಈ ವೇಳೆ ಮಾತನಾಡಿದ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಸಿಇಒ ಡಾ.ಸೆಲ್ವಮಣಿ ಆರ್ಅವರು,, ಮತದಾನ ಕಡಿಮೆ ಆಗಿರುವ ಪ್ರದೇಶಗಳನ್ನು ಗುರುತಿಸಿ, ಮತದಾನ ಹಕ್ಕಿನ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಸ್ಪಂದಿಸಿ ಹೆಚ್ಚಿನ ಮತದಾನ ಮಾಡಬೇಕೆಂದು ಜಿಲ್ಲೆಯ ಜನರಲ್ಲಿ ವಿನಂತಿಸಿವುದಾಗಿ ತಿಳಿಸಿದರು.

ಎ. 1ರಿಂದ ಉಳಿದ ಗ್ರಾಮಾಂತರ ಪ್ರದೇಶಗಳಿಗೆ ಇನ್ನೆರಡು ವಾಹನಗಳ ಮೂಲಕ ಪ್ರಚಾರ ಜಾಥಾ ನಡೆಸಲಾಗುವುದು ಎಂದು ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಸೆಲ್ವಮಣಿ ಆರ್. ತಿಳಿಸಿದರು. ಈ ಸಂದರ್ಭ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಮುಹಮ್ಮದ್ ನಜೀರ್, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಸುಧಾಕರ್ ಉಪಸ್ಥಿತರಿದ್ದರು.

Comments are closed.