ಕರಾವಳಿ

ಲೋಕಸಭಾ ಚುನಾವಣೆ : ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

Pinterest LinkedIn Tumblr

ಮಂಗಳೂರು, ಮಾರ್ಚ್,18 : ಲೋಕಸಭಾ ಚುನಾವಣೆ 2019ರ ನಾಮಪತ್ರ ಸಲ್ಲಿಕೆ ಮಾರ್ಚ್ 19ರಿಂದಪ್ರಾರಂಭವಾಗಲಿದೆ. ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ನಾಮಪತ್ರಗಳನ್ನು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ವೀಕರಿಸುವರು.

ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಒಟ್ಟು 5 ಮಂದಿ ಮಾತ್ರ ಉಪಸ್ಥಿತರಿರಲು ಅವಕಾಶವಿದೆ. ಮಾಧ್ಯಮ ಪ್ರತಿನಿಧಿಗಳಿಗೆ ನಾಮಪತ್ರ ಸಲ್ಲಿಕೆಯ ವಿಡಿಯೊ ಹಾಗೂ ಛಾಯಾಚಿತ್ರಗಳನ್ನು ಜಿಲ್ಲಾ ಚುನಾವಣಾ ಶಾಖೆಯಿಂದ ಒದಗಿಸಿಕೊಡಲಾಗುವುದು. ಸಹಕರಿಸಲು ಕೋರಲಾಗಿದೆ.

Comments are closed.