ಕರಾವಳಿ

ಉಡುಪಿ-ಚಿಕ್ಕಮಗಳೂರು: ಜೆಡಿಎಸ್ ಪಕ್ಷದಿಂದ ‘ಕೈ’ ನಾಯಕ ಪ್ರಮೋದ್ ಮಧ್ವರಾಜ್ ಸ್ಪರ್ಧೆ?

Pinterest LinkedIn Tumblr

ಉಡುಪಿ: ಪ್ರಸಕ್ತ ರಾಜಕೀಯ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರಕಾರದಿಂದ ಜೆಡಿಎಸ್ ಗೆ ಬಿಟ್ಟುಕೊಡಲಾದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆಯೆಂಬ ಮಾಹಿತಿ ಸಿಕ್ಕಿದೆ.

ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಮೋದ್ ಮಧ್ವರಾಜ್ ಒಂದೆರಡು ದಿನಗಳ ಹಿಂದೆ ಮಾಜಿ ಪ್ರಧಾನಿ ದೇವೇಗೌಡ ಮತ್ತು ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಜೆಡಿಎಸ್ ನಲ್ಲಿ ಅವಕಾಶ ಕೊಟ್ಟರೆ ಸ್ಪರ್ಧಿಸುವುದಾಗಿ ಜೆಡಿಎಸ್ ವರಿಷ್ಠರ ಬಳಿ ಪ್ರಮೋದ್ ಮಧ್ವರಾಜ್ ಮನವಿ‌ ಮಾಡಿಕೊಂಡಿದ್ದು, ಬುಧವಾರ ಅಥವಾ ಗುರುವಾರ ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳಲಿದೆ ಎನ್ನಲಾಗುತ್ತಿದೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟ ಬಗ್ಗೆ ಕಾಂಗ್ರೆಸ್ ಪಕ್ಷದೊಳಗೆ ತೀವೃ ಅಸಮಾಧಾನ ವ್ಯಕ್ತವಾಗಿದ್ದು ಈ ಬಗ್ಗೆ ಉಡುಪಿಯಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ಕೂಡ ನಡೆಸಿತ್ತು. ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟ ಹಿನ್ನೆಲೆ ಇದು ಬಿಜೆಪಿಗೆ ಅನಾಯಾಸವಾಗಿ ಗೆಲುವು ಸಾಧಿಸುವಲ್ಲಿ ಅವಕಾಶವಾಗುವ ದಟ್ಟ ಸಾಧ್ಯತೆಯೂ ಇತ್ತು. ಈ ನಡುವೆ ಜೆಡಿಎಸ್ ನಿಂದ ಮಾಜಿ ಸಚಿವ ಹಾಗೂ ಮೊಗವೀರ ಸಮಾಜದ ಪ್ರಮೋದ್ ಸ್ಪರ್ಧೆ ಮಾಡುತ್ತಿರುವುದು ಕೆಲ ಗೊಂದಲಗಳಿಗೂ ಕಾರಣವಾಗಿದೆ.

Comments are closed.