ಕರಾವಳಿ

ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಲಾಡ್ಜ್‌ಗೆ ದಾಳಿ : ಓರ್ವನ ಸೆರೆ – ಇಬ್ಬರು ಮಹಿಳೆಯರ ರಕ್ಷಣೆ

Pinterest LinkedIn Tumblr

ಮಂಗಳೂರು : ಅನೈತಿಕ ಚಟುವಟಿಕೆ ನಡೆಸಲು ಕೊಠಡಿಯನ್ನು ಬಾಡಿಗೆಗೆ ನೀಡುತ್ತಿದ್ದ ಆರೋಪದ ಮೇಲೆ ನಗರದ ಲಾಡ್ಜ್ ಒಂದಕ್ಕೆ ದಾಳಿ ನಡೆಸಿರುವ ಪೊಲೀಸರು ಓರ್ವನನ್ನು ಬಂಧಿಸಿದ್ದು, ಇಬ್ಬರು ಮಹಿಳೆಯರನ್ನು ಮಹಿಳಾ ಸ್ವೀಕಾರ ಕೇಂದ್ರಕ್ಕೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಡುಯ ರತ್ನಾಕರ ಶೆಟ್ಟಿ ಎಂದು ಹೆಸರಿಸಲಾಗಿದೆ.

ಮಂಗಳೂರು ನಗರದ ರಾವ್ & ರಾವ್ ಸರ್ಕಲ್ ನ ಬಳಿ ಇರುವ ಮೈದಾನ 4ನೇ ಕ್ರಾಸ್ ರಸ್ತೆಯಲ್ಲಿರುವ ದರ್ಬಾರ್ ಲಾಡ್ಜ್ ಗೆ ದಾಳಿ ನಡೆಸಿದಾಗ ದರ್ಬಾರ್ ಲಾಡ್ಜ್ ನ ಮಾಲೀಕನಾದ ಸುಭಾಶ್ಚಂದ್ರ ಹೆಗ್ಡೆ ಎಂಬಾತನ ನಿರ್ದೆಶನದ ಮೇರೆಗೆ ಆತನ ಸಹವರ್ತಿ ರತ್ನಾಕರ ಶೆಟ್ಟಿ ಎಂಬಾತನು ಅನೈತಿಕ ಚಟುವಟಿಕೆ ನಡೆಸಲು ಕೊಠಡಿಯನ್ನು ಬಾಡಿಗೆಗೆ ನೀಡುತ್ತಿರುವುದು ಪತ್ತೆಯಾಗಿದ್ದು, ಸ್ಥಳದಲ್ಲಿದ್ದ ಆರೋಪಿ ರತ್ನಾಕರ ಶೆಟ್ಟಿ ಎಂಬಾತನನ್ನು ಬಂಧಿಸಲಾಗಿದೆ.

ಸ್ಥಳದಲ್ಲಿದ್ದ ಇಬ್ಬರು ನೊಂದ ಮಹಿಳೆಯರನ್ನು ಮಹಿಳಾ ಸ್ವೀಕಾರ ಕೇಂದ್ರಕ್ಕೆ ಒಪ್ಪಿಸಲಾಗಿದೆ. ಆರೋಪಿಯಿಂದ 3015/- ರೂಪಾಯಿಗಳನ್ನು ವಶಪಡಿಸಲಾಗಿದ್ದು, ಆರೋಪಿಗಳ ವಿರುದ್ದ ಮಂ.ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಲಾಡ್ಜ್ ನ ಮಾಲಿಕ ಆರೋಪಿ ಸುಭಾಶ್ಚಂದ್ರ ಹೆಗ್ಡೆ ತಲೆಮರೆಸಿಕೊಂಡಿದ್ದು, ಅತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಪೊಲೀಸ್ ಆಯುಕ್ತರು ಮಂಗಳೂರು ನಗರ ಮಂಗಳೂರು, ಉಪ ಪೊಲೀಸ್ ಆಯುಕ್ತರು (ಕಾ&ಸು) ಹಾಗೂ ಉಪ ಪೊಲೀಸ್ ಆಯುಕ್ತರು (ಅಪರಾಧ ವಿಭಾಗ) ಮತ್ತು ಸಹಾಯಕ ಪೊಲೀಸ್ ಆಯುಕ್ತರು ಕೇಂದ್ರ ಉಪ ವಿಭಾಗದವರ ಮಾರ್ಗದರ್ಶನದಂತೆ ನಡೆದ ಪತ್ತೆ ಕಾರ್ಯಾಚರಣೆಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

Comments are closed.