ಕರಾವಳಿ

ಲೋಕಸಭಾ ಚುನಾವಣೆ : ಮಂಗಳೂರಿನಲ್ಲಿ ಪ್ರಥಮ ನಾಮಪತ್ರ ಸಲ್ಲಿಕೆ

Pinterest LinkedIn Tumblr

ಮಂಗಳೂರು, ಮಾರ್ಚ್.20: ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮಂಗಳವಾರ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ. ಲೋಕತಾಂತ್ರಿಕ ಜನತಾ ದಳ ಪಕ್ಷದ ಅಭ್ಯರ್ಥಿ ಸುಪ್ರೀತ್ ಪೂಜಾರಿ ನಾಮಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ ಮೊದಲ ದಿನವೇ ಪ್ರಥಮ ನಾಮಪತ್ರ ಸಲ್ಲಿಕೆಯಾಗಿದೆ.

ಮಾ.26ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು, ಎಸ್‌ಡಿಪಿಐ ಈಗಾಗಲೆ ಪಕ್ಷದ ಅಭ್ಯರ್ಥಿಯನ್ನು ಘೋಷಿಸಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಇನ್ನೂ ಅಧಿಕೃತವಾಗಿ ಅಭ್ಯರ್ಥಿಯನ್ನು ಘೋಷಿಸಿಲ್ಲ.

ಎರಡನೇ ದಿನ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ :

ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಇಂದು ಯಾವುದೇ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸಿರುವುದಿಲ್ಲ ಎಂದು ಚುನಾವಣ ಆಯೋಗದ ಪ್ರಕಟಣೆ ತಿಳಿಸಿದೆ.

Comments are closed.