ಕರಾವಳಿ

ನಾಳೆಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ; ಜಿಲ್ಲೆಯಲ್ಲಿ ವ್ಯಾಪಕ ಸಿದ್ಧತೆ – ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್

Pinterest LinkedIn Tumblr

ಮಂಗಳೂರು ಮಾರ್ಚ್ 20 : ನಾಳೆಯಿಂದ (ಮಾರ್ಚ್ 21ರಿಂದ) ಕರ್ನಾಟಕ ರಾಜ್ಯದ ಎಸ್‍ಎಸ್‍ಎಲ್‍ಸಿ ಅಂತಿಮ ಪರೀಕ್ಷೆಗಳು ಪ್ರಾರಂಭವಾಗುತ್ತಿದೆ. ಪರೀಕ್ಷೆ ದ.ಕ.ಜಿಲ್ಲೆಯಲ್ಲಿ ವ್ಯಾಪಕ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ದ.ಕ.ಜಿಲ್ಲೆಯ ಹೆಚ್ಚಿನ ಶಾಲೆಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಬ್ಯಾನರ್ ಗಳನ್ನು ಹಾಕಲಾಗಿದೆ. ವಿದ್ಯಾರ್ಥಿಗಳಿಗೆ ಅವರ ವಿದ್ಯಾ ಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಲ್ಲಿ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದಾಗಿ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆಯವರು ತಿಳಿಸಿರುತ್ತಾರೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಕರಾರಸಾ.ನಿಗಮವು, ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಅಂದರೆ ದಿನಾಂಕ: 21.03.2019 ರಿಂದ 04.04.2019 ರವರೆಗೆ ಪರೀಕ್ಷೆಗೆ ಹಾಜರಾಗುವ ಕರಾರಸಾ ನಿಗಮದ ವತಿಯಿಂದ ವಿತರಿಸಿರುವ ವಿದ್ಯಾರ್ಥಿ ರಿಯಾಯಿತಿ ಬಸ್‍ಪಾಸ್ ಹೊಂದಿರುವ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ವಾಸಸ್ಥಳಕ್ಕೆ ಹಿಂದಿರುಗುವಾಗ ಬಸ್ ಪಾಸ್ ಹಾಗು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿ ವರ್ಗದವರು ಈ ಸೌಲಭ್ಯವನ್ನು ಪಡೆದುಕೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿ, ಕರಾರಸಾಸಂ, ಮಂಗಳೂರು ಇವರ ಪ್ರಕಟನೆ ತಿಳಿಸಿದೆ.

Comments are closed.