ಮಂಗಳೂರು: ನಗರದ ಬಿಜೈಯ ಬಹುಮಹಡಿ ಕಟ್ಟಡದ ೭ನೇ ಅಂತಸ್ತಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇಂದು ನಡೆದಿದ್ದು, ಈ ವೇಳೆ ಮನೆಯಲ್ಲಿ ಯಾರೂ ಇಲ್ಲದೇ ಇದ್ದುದ್ದರಿಂದ ಯಾವೂದೇ ಪ್ರಾಣಹಾನಿ ಸಂಭವಿಸಲಿಲ್ಲ.
ನಗರದ ಬಿಜೈ ಮಾರುಕಟ್ಟೆ ಸಮೀಪದ ದೀಪಾಂಜಲಿ ಅಪಾರ್ಟ್‌ಮೆಂಟ್‌ನ ಏಳನೇ ಮಹಡಿಯಲ್ಲಿ ಈ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಗ್ನಿ ಅವಘಡ ಸಂಭವಿಸಿದ ಫ್ಲಾಟ್ ನಲ್ಲಿ ಕೆಲವು ವಿದ್ಯಾರ್ಥಿಗಳು ವಾಸವಾಗಿದ್ದರು ಎಂದು ಹೇಳಲಾಗಿದೆ. ಆದರೆ ಅವಘಡ ಸಂಭವಿಸಿದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ. ಶಾರ್ಟ್ ಸರ್ಕ್ಯುಟ್ ನಿಂದ ಅನಾಹುತ ಸಂಭವಿಸರಬೇಕೆಂದು ಶಂಕಿಸಲಾಗಿದೆ.
Comments are closed.