ಕರಾವಳಿ

ಗಾಂಜಾ ಮಾರಾಟ ಹಾಗೂ ಸೇವನೆ : ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಸೆರೆ – ಸೊತ್ತು ವಶ

Pinterest LinkedIn Tumblr

ಮಂಗಳೂರು, ಮಾರ್ಚ್. 22: ಗಾಂಜಾ ಮಾರಾಟ ಹಾಗೂ ಗಾಂಜಾ ಸೇವನೆ ಪ್ರಕರಣಕ್ಕೆ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತರನ್ನು ಗಾಂಜಾ ಮಾರಾಟ ಪ್ರಕರಣದ ಆರೋಪಿ ಶಾಂತಿನಗರದ ಸುಹೇಬ್ (20) ಹಾಗೂ ಗಾಂಜಾ ಸೇವನೆ ಪ್ರಕರಣದ ಆರೋಪಿ ಪಂಡಿತ್ ಹೌಸ್ ನಿವಾಸಿ ಜಯಂತ್ (24) ಎಂದು ಹೆಸರಿಸಲಾಗಿದೆ.

ನಗರದ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯ ಅಧಿಕಾರಿಗಳು ನಗರದ ಕಾವೂರು ಜಂಕ್ಷನ್ ಬಳಿಯ ಕೂಳೂರು ರಸ್ತೆಯ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಶಾಂತಿನಗರದ ಸುಹೇಬ್ ನನ್ನು ಬಂಧಿಸಿದ್ದಾರೆ.

ಆರೋಪಿಯಿಂದ ಸುಮಾರು 110 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಮತ್ತು ಮೊಬೈಲ್ ಪೋನನ್ನು ವಶಪಡಿಸಲಾಗಿದ್ದು ವಶಪಡಿಸಿದ ಎಲ್ಲಾ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 27,000 ರೂ. ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಂಜಾ ಸೇವನೆ : ಸೆರೆ

ಇನ್ನೊಂದು ಪ್ರಕರಣದಲ್ಲಿ ಮಂಗಳೂರು ನಗರದ ನೆಹರೂ ಮೈದಾನದ ಬಳಿಯ ಪುಟ್ಬಾಲ್ ಮೈದಾನದ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪಿ ಜಯಂತ್ ನನ್ನು ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಮೇಲಾಧಿಕಾರಿಗಳ ಮಾರ್ಗದರ್ಶನದಂತೆ ನಡೆದ ಕಾರ್ಯಾಚರಣೆಯಲ್ಲಿ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯ ನಿರೀಕ್ಷಕ ರಾಮಕೃಷ್ಣ ಕೆ.ಕೆ. ಮತ್ತು ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.

Comments are closed.