ಮಂಗಳೂರು, ಮಾರ್ಚ್,22 : ಅತ್ಯಂತ ಕುತೂಹಲ ಕೆರಳಿಸಿರುವ ದ.ಕ.ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಯ್ಕೆ ಬಹುತೇಕ ಖಚಿತಗೊಂಡಿದ್ದು, ಬಹುದಿನಗಳಿಂದ ಕಗ್ಗಂಟಾಗಿದ್ದ ದ.ಕ.ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ಇನ್ನು ಕೆಲವೆ ಗಂಟೆಗಳಲ್ಲಿ ತೆರೆ ಬೀಳಲಿದೆ.
ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಕಾಂಗ್ರೆಸ್ ಇನ್ನೂ ಕೂಡ ದ.ಕ.ಲೋಕಸಭಾ ಕ್ಷೇತ್ರದ ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಈಗಾಗಲೇ ದ.ಕ.ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಸಹಿತ ರಾಜ್ಯ ನಾಯಕರನ್ನು ದೆಹಲಿಗೆ ಕರೆದಿದ್ದು ಸಭೆ ನಡೆಸಿರುವ ಕಾಂಗ್ರೆಸ್ ಮುಖಂಡರು ಅಭ್ಯರ್ಥಿ ಅಯ್ಕೆ ಕುರಿತು ಒಮ್ಮತದ ತೀರ್ಮಾನಕ್ಕೆ ಬಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾಜಿ ಸಚಿವರಾದ ರಮಾನಾಥ ರೈ,ವಿನಯ ಕುಮಾರ್ ಸೊರಕೆ, ಬಿ.ಕೆ ಹರಿಪ್ರಸಾದ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಪಕ್ಷದ ಮುಖಂಡರಾದ ಕಣಚೂರು ಮೋನು ಹಾಗೂ ಎಸ್ ಸಿ ಡಿಸಿಸಿ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮೊದಲಾದವರು ದ.ಕ.ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೆಸ್ ನಲ್ಲಿದ್ದರು.
ಆದರೆ ಯುತ್ ಮುಖಂಡ ಮಿಥುನ್ ರೈ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದು ಅಪಾರ ಯುವ ಸಮೂಹದ ಬೆಂಬಲ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ದ.ಕ.ಲೋಕಸಭಾ ಕ್ಷೇತ್ರವನ್ನು ಕೈ ವಶ ಮಾಡಿಕೊಳ್ಳಲು ಯುವ ನಾಯಕ ಮಿಥುನ್ ರೈ ಅವರೇ ಸೂಕ್ತ ಅಭ್ಯರ್ಥಿ ಎಂಬ ತೀರ್ಮಾನಕ್ಕೆ ಕಾಂಗ್ರೆಸ್ ಮುಖಾಂಡರು ಬಂದಿದ್ದಾರೆ ಎನ್ನಲಾಗಿದೆ.
ಬಿಜೆಪಿಯಿಂದ ಈಗಾಗಲೇ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೇ ಟಿಕೆಟ್ ನೀಡಲಾಗಿದ್ದು, ಬಂಟ ಸಮಾಜದ ನಳಿನ್ ಕುಮಾರ್ ಕಟೀಲ್ ಅವರನ್ನೆದುರಿಸಲು ಬಂಟ ಸಮಾಜದವರೇ ಆದ ಮಿಥುನ್ ರೈ ಅವರೇ ಸಮರ್ಥ ಅಭ್ಯರ್ಥಿ ಎಂಬುವುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರವಾಗಿದೆ. ಈ ಹಿನ್ನೆಲೆಯಲ್ಲಿ ದ.ಕ.ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಿಥುನ್ ರೈ ಆಯ್ಕೆ ಬಹುತೇಕ ಖಚಿತಗೊಂಡಿದೆ .ಮಾರ್ಚ್ 25ರೊಳಗೆ ಯಾವಾಗ ಬೇಕಾದರೂ ಅಬ್ಯರ್ಥಿ ಅಯ್ಕೆಯ ಘೋಷಣೆಯಾಗ ಬಹುದು ಎಂದು ಕಾಂಗ್ರೆಸ್ ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.
Comments are closed.