ಕರಾವಳಿ

ಲೋಕಸಭಾ ಚುನಾವಣೆ ಹಿನ್ನೆಲೆ : ನಗರದಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ – ರೌಡಿ ಮತ್ತು ಗೂಂಡಾಗಳಿಂದ ಮುಚ್ಚಳಿಕೆ

Pinterest LinkedIn Tumblr

ಮಂಗಳೂರು, ಮಾರ್ಚ್.23: ‘ಮುಂಬರುವ ಲೋಕಸಭಾ ಚುನಾವಣೆ ಸಂದರ್ಭ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಹಾಗೂ ಶಾಂತಿಯುತವಾಗಿ ಮತದಾನ ನಡೆಯುವ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಈಗಾಗಲೇ ಮುಂಜಾಗ್ರತಾ ಕ್ರಮವಾಗಿ 1,206 ರೌಡಿ ಮತ್ತು ಗೂಂಡಾಗಳಿಂದ ಮುಂಜಾಗೃತ ಕಾಯ್ದೆಯಡಿ ಮುಚ್ಚಳಿಕೆ ಪಡೆಯಲಾಗಿದೆ. ‘ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ 447 ಜಾಮೀನು ರಹಿತ ವಾರೆಂಟ್ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ರೌಡಿಗಳಿಗೆ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಎಚ್ಚರಿಕೆ ನೀಡಲಾಗಿದೆ’ ಸ್ಥಳೀಯ ಠಾಣೆಗಳಲ್ಲಿ ಸುಮಾರು 1,957 ಬಂದೂಕು ಆಯುಧಗಳನ್ನು ಠೇವಣಿ ಇರಿಸಲಾಗಿದೆ’ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಮಂಗಳೂರು ನಗರಕ್ಕೆ ಭದ್ರತೆಗಾಗಿ ಕೇಂದ್ರೀಯ ಸಶಸ್ತ್ರ ಮೀಸಲು ಪೊಲೀಸ್ ದಳದ ಒಂದು ಕಂಪನಿ ಬಂದಿದೆ. ಈಗಾಗಲೇ ಸೂಕ್ಷ್ಮ ಪ್ರದೇಶದ 12 ಸೂಕ್ಷ್ಮ ಸ್ಥಳಗಳಲ್ಲಿ ಸಿ.ಎ.ಪಿ.ಎಫ್. ಮತ್ತು ಪೊಲೀಸ್ ಇಲಾಖೆಯು ಜಂಟಿ ಪಥ ಸಂಚಲನೆ ನಡೆಸಿದೆ. ‘ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿ ಎಲ್ಲ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಚುನಾವಣಾ ಕರ್ತವ್ಯದ ತರಬೇತಿ ನೀಡಲಾಗಿದೆ ಎಂದು ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ.

Comments are closed.