ಕರಾವಳಿ

ಎಸ್‌ಸಿಡಿಸಿಸಿ ಬ್ಯಾಂಕ್ ಚುನಾವಣೆ : ಎಂಎನ್‌ಆರ್ ಬಣದ ಎಲ್ಲಾ16 ಅಭ್ಯರ್ಥಿಗಳು ವಿಜಯಿ

Pinterest LinkedIn Tumblr

ಮಂಗಳೂರು, ಮಾರ್ಚ್.23: ಅವಿಭಜಿತ ದ.ಕ. ಜಿಲ್ಲಾ ಎಸ್‌ಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್ ನೇತೃತ್ವದ ಸಹಕಾರಿ ಕ್ಷೇತ್ರದ ಎಲ್ಲಾ ಅಭ್ಯರ್ಥಿಗಳು ಜಯಗಳಿಸಿದ್ದಾರೆ.

ಎಸ್‌ಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯ ಶುಕ್ರವಾರ ನಡೆದ ಚುನಾವಣೆಯಲ್ಲಿ ಎಂ.ಎನ್.ರಾಜೇಂದ್ರಕುಮಾರ್ ನೇತೃತ್ವದ ಸಹಕಾರಿ ಕ್ಷೇತ್ರದ 16 ಅಭ್ಯರ್ಥಿಗಳು ಸ್ಫರ್ಧಿಸಿದ್ದು, ಸ್ಫರ್ಧಿಸಿದ ಎಲ್ಲಾ 16 ಅಭ್ಯರ್ಥಿಗಳು ‘ಸಹಕಾರ ಭಾರತಿ’ ವಿರುದ್ಧ ಜಯ ಗಳಿಸಿದ್ದಾರೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರ ಸಂಘ, ಪಟ್ಟಣ ಸಹಕಾರ ಬ್ಯಾಂಕ್, ಕೃಷಿಯೇತರ ಪತ್ತಿನ ಸಹಕಾರ ಸಂಘ ಮತ್ತು ಇತರ ಎಲ್ಲ ಸಹಕಾರ ಸಂಘಗಳ ಪ್ರತಿನಿಧಿಗಳು ಮತ ಚಲಾಯಿಸಿದರು.

ಎಂ.ಎನ್.ರಾಜೇಂದ್ರಕುಮಾರ್, ಭಾಸ್ಕರ್ ಎಸ್. ಕೋಟ್ಯಾನ್, ವಿನಯಕುಮಾರ್ ಸೂರಿಂಜೆ, ಕೆ.ಹರೀಶ್ಚಂದ್ರ, ಎಸ್.ರಾಜು ಪೂಜಾರಿ, ಎಂ.ಮಹೇಶ್ ಹೆಗ್ಡೆ, ದೇವಿಪ್ರಸಾದ್ ಶೆಟ್ಟಿ, ಬಿ.ಅಶೋಕಕುಮಾರ್ ಶೆಟ್ಟಿ, ಕೆ.ಎಸ್.ದೇವರಾಜ್, ಶಶಿಕುಮಾರ್ ರೈ ಬಿ., ಎಂ.ವಾದಿರಾಜ ಶೆಟ್ಟಿ, ಬಿ.ನಿರಂಜನ, ಟಿ.ಜಿ.ರಾಜರಾಮ್ ಭಟ್, ಮೋನಪ್ಪ ಶೆಟ್ಟಿ ಎಕ್ಕಾರು, ಕೆ.ಜೈರಾಜ್ ಬಿ. ರೈ, ಎಸ್.ಬಿ. ರೈ ಜಯ ಗಳಿಸಿದ್ದಾರೆ.

ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತ ರಿಟರ್ನಿಂಗ್ ಅಧಿಕಾರಿ ರವಿಚಂದ್ರ ನಾಯಕ್ ‘ಅಭ್ಯರ್ಥಿಗಳು ಕ್ರಮಬದ್ಧವಾಗಿ ಚುನಾಯಿತರಾಗಿದ್ದಾರೆ’ ಎಂದು ಘೋಷಿಸಿದರು.

Comments are closed.