ಕರಾವಳಿ

ದ.ಕ.ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಯುವ ನಾಯಕ ಮಿಥುನ್ ರೈ ಅಯ್ಕೆ – ನಾಳೆ ನಾಮಪತ್ರ ಸಲ್ಲಿಕೆ

Pinterest LinkedIn Tumblr

ಮಂಗಳೂರು, ಮಾರ್ಚ್.24: ಭಾರೀ ಕುತೂಹಲ ಮೂಡಿಸಿದ್ದ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಯ್ಕೆಯಾಗಿದ್ದು, ಮಾ.25ರಂದು ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಯುವ ನಾಯಕ ಮಿಥುನ್ ರೈ ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಯ ಪೂರ್ವಭಾವಿಯಾಗಿ ಬೆಳಗ್ಗೆ 10 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಲಿದೆ. ಬಳಿಕ ಪಾದಯಾತ್ರೆಯ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿರುವರು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ದ.ಕ. ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಬಹಳಷ್ಟು ಪ್ರಭಾವಿ ಆಕಾಂಕ್ಷಿಗಳಿದ್ದ ಕಾರಣ ಒಮ್ಮತದ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಗೆ ಕಗ್ಗಂಟಾಗಿ ಪರಿಣಮಿಸಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರಮುಖ ಕಾಂಗ್ರೆಸ್ ಮುಖಂಡರನ್ನು ದಿಲ್ಲಿಗೆ ಕರೆಸಲಾಗಿತ್ತು. ಅಲ್ಲಿ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನಿವಾಸದಲ್ಲಿ ಎರಡು ದಿನಗಳ ಕಾಲ ಕಾಂಗ್ರೆಸ್ ರಾಜ್ಯ ಮತ್ತು ದ.ಕ. ಜಿಲ್ಲಾ ಮುಖಂಡರ ಉಪಸ್ಥಿತಿಯಲ್ಲಿ ಸಭೆ ನಡೆದಿತ್ತು.

ಈ ಸಂದರ್ಭ ಹೊಸ ಮುಖಕ್ಕೆ ಆದ್ಯತೆ ನೀಡಲು ರಾಜ್ಯ ನಾಯಕರು ಆಸಕ್ತಿ ತೋರಿದ್ದರಿಂದ ಮಿಥುನ್ ರೈ ಹೆಸರು ಮುಂಚೂಣಿಗೆ ಬಂದಿತ್ತು. ಅಂತಿಮವಾಗಿ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರನ್ನು ಅಯ್ಕೆ ಮಾಡಲಾಯಿತು.

ಮಾಜಿ ಸಚಿವರಾದ ರಮಾನಾಥ ರೈ,ವಿನಯ ಕುಮಾರ್ ಸೊರಕೆ, ಬಿ.ಕೆ ಹರಿಪ್ರಸಾದ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಪಕ್ಷದ ಮುಖಂಡರಾದ ಕಣಚೂರು ಮೋನು ಹಾಗೂ ಎಸ್ ಸಿ ಡಿಸಿಸಿ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಮೊದಲಾದವರು ದ.ಕ.ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೆಸ್ ನಲ್ಲಿದ್ದರು.

ಆದರೆ ಯುತ್ ಮುಖಂಡ ಮಿಥುನ್ ರೈ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದು ಅಪಾರ ಯುವ ಸಮೂಹದ ಬೆಂಬಲ ಪಡೆದಿದ್ದಾರೆ. ಬಿಜೆಪಿಯಿಂದ ಈಗಾಗಲೇ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೇ ಟಿಕೆಟ್ ನೀಡಲಾಗಿದ್ದು, ಬಂಟ ಸಮಾಜದ ನಳಿನ್ ಕುಮಾರ್ ಕಟೀಲ್ ಅವರನ್ನೆದುರಿಸಲು ಬಂಟ ಸಮಾಜದವರೇ ಆದ ಮಿಥುನ್ ರೈ ಅವರೇ ಸಮರ್ಥ ಅಭ್ಯರ್ಥಿ ಎಂಬುವುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರವಾಗಿದೆ. ಈ ಹಿನ್ನೆಲೆಯಲ್ಲಿ ದ.ಕ.ಲೋಕಸಭಾ ಕ್ಷೇತ್ರವನ್ನು ಕೈ ವಶ ಮಾಡಿಕೊಳ್ಳಲು ಯುವ ನಾಯಕ ಮಿಥುನ್ ರೈ ಅವರೇ ಸೂಕ್ತ ಅಭ್ಯರ್ಥಿ ಎಂಬ ತೀರ್ಮಾನಕ್ಕೆ ಬಂದ ಕಾಂಗ್ರೆಸ್ ಮುಖಂಡರು ಮಿಥುನ್ ರೈ ಅವರನ್ನು ಅಯ್ಕೆ ಮಾಡಿದ್ದಾರೆ.

Comments are closed.