ಕರಾವಳಿ

ಕಾಂಗ್ರೆಸ್ ಮುಖಂಡ ಪೂಜಾರಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ನಳಿನ್​ ಕುಮಾರ್ ಕಟೀಲ್

Pinterest LinkedIn Tumblr

ಮಂಗಳೂರು, ಮಾರ್ಚ್.24: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಲಿ ಸಂಸದ ನಳಿನ್​ ಕುಮಾರ್ ಕಟೀಲ್​ ಅವರು ಇಂದು ಕಾಂಗ್ರೆಸ್​ ನಾಯಕ ಬಿ.ಜನಾರ್ದನ ಪೂಜಾರಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ನಳಿನ್ ಕುಮಾರ್ ಅವರು ರವಿವಾರ ಪಕ್ಷದ ಮುಖಂಡರ ಹಾಗೂ ತಮ್ಮ ಬೆಂಬಲಿಗರೊಂದಿಗೆ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ವೇಳೆ ಅಲ್ಲಿ ಜನಾರ್ದನ ಪೂಜಾರಿಯವರನ್ನು ಭೇಟಿಯಾದ ನಳಿನ್ ಕುಮಾರ್ ಕಟೀಲ್ ಪೂಜಾರಿ ಜೊತೆ ಮಾತುಕತೆ ನಡೆಸಿದರು. ಬಳಿಕ ನಳಿನ್​, ಜನಾರ್ದನ್​ ಪೂಜಾರಿಯವರ ಕಾಲಿಗೆರಗಿ ಆಶೀರ್ವಾದ ಪಡೆದಿದ್ದಾರೆ.

ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್, ಮಾಜಿ ಶಾಸಕ ಯೋಗೀಶ್ ಭಟ್ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Comments are closed.