
ಮಂಗಳೂರು, ಮಾರ್ಚ್ .24 : ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮಾ.25 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿಯ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಮಾ.25 ರಂದು ಬೆಳಗ್ಗೆ 9.30ಕ್ಕೆ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಬಳಿಕ ಪಕ್ಷದ ಪ್ರಮುಖರ ಜತೆ ನಳಿನ್ ಕುಮಾರ್ ಕಟೀಲ್ ಅವರು ದ.ಕ.ಜಿಲ್ಲಾಧಿಕಾರಿ ಕಚೇರಿಗೆ ತೆರಳಿ 10.45 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ, ಶಾಸಕ ಸಂಜೀವ ಮಠಂದೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.