ಕರಾವಳಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ನಾಮಪತ್ರ ಸಲ್ಲಿಕೆ

Pinterest LinkedIn Tumblr

ಮಂಗಳೂರು ಮಾರ್ಚ್ 25 : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದಿಂದ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಬೆಳಗ್ಗೆ ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಸಂಜೀವ ಮಠಂದೂರು, ಶಾಸಕ ಸುನೀಲ್ ಕುಮಾರ್, ವಿಧಾನ ಪರಿಷತ್‌ನ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಪಕ್ಷದ ಪ್ರಮುಖರಾದ ಪುರುಷೋತ್ತಮಭಟ್ ಉಪಸ್ಥಿತರಿದ್ದರು.

Comments are closed.