ಕರಾವಳಿ

ಬೃಹತ್ ಪಾದಯಾತ್ರೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ರೈ

Pinterest LinkedIn Tumblr

Κಮಂಗಳೂರು, ಮಾರ್ಚ್ 25: ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಅಭ್ಯರ್ಥಿ, ಯುವ ನಾಯಕ ಮಿಥುನ್ ರೈ ಅವರು ಸೋಮವಾರ ಮಧ್ಯಾಹ್ನ ಮಂಗಳೂರಿನ ಪುರಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಪಾದಯಾತೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.

ಈ ವೇಳೆ ಪಕ್ಷದ ಮುಖಂಡರಾದ ಜನಾರ್ದನ ಪೂಜಾರಿ, ರಮಾನಾಥ ರೈ, ಯು.ಟಿ.ಖಾದರ್, ಜೆ.ಆರ್.ಲೋಬೋ, ಮೊಯ್ದಿನ್ ಬಾವ, ಅಭಯಚಂದ್ರ ಜೈನ್, ಶಕುಂತಲ ಶೆಟ್ಟಿ, ಹರೀಶ್ ಕುಮಾರ್, ಕೆ.ಎಸ್.ಮಸೂದ್, ಜೆಡಿಎಸ್ ಮುಖಂಡರಾದ ಅಮರನಾಥ ಶೆಟ್ಟಿ, ಮೊಹಮ್ಮದ್ ಕುಂಜ್ಞಿ ಸೇರಿದಂತೆ ಸಹಸ್ರಾರು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹಾಗೂ ಜೆಡಿ ಎಸ್ ಪಕ್ಷದ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

Comments are closed.