ಕರಾವಳಿ

ಮೋದಿ ಅಲೆಯಲ್ಲ, ಸುನಾಮಿಯೇ ಅಪ್ಪಳಿಸಲಿದೆ – ಪರಿಣಾಮ ಇಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಲಿದೆ : ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್

Pinterest LinkedIn Tumblr

ಮಂಗಳೂರು, ಮಾರ್ಚ್. 25: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರ ಚುನಾವಣಾ ಕಚೇರಿ ಸೋಮವಾರ ನಗರದ ಬಂಟ್ಸ್ ಹಾಸ್ಟೆಲ್ ಬಳಿ ಇರುವ ಅಭಿಮಾನ್ ಹೋಟೇಲ್ ಮುಂಭಾದಲ್ಲಿ ಶುಭಾರಂಭಗೊಂಡಿತು.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಬೆಳಗ್ಗೆ ನಾಮಪತ್ರ ಸಲ್ಲಿಸುವ ಮುನ್ನ ತಮ್ಮ ನೂತನ ಚುನಾವಣಾ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡರು.

ಸೋಮವಾರ ಬೆಳಗ್ಗೆ ಹಾಲಿ ಸಂಸದ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಸಂಜೀವ ಮಟಂದೂರು, ಕಾರ್ಕಳ ಶಾಸಕ ಸುನಿಲ್ ಕುಮಾರ್, ದ.ಕ ಜಿಲ್ಲೆಯ ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಉಮಾನಾಥ ಕೊಟ್ಯಾನ್, ಡಾ.ಭರತ್ ಶೆಟ್ಟಿ, ಅಂಗಾರ, ರಾಜೇಶ್ ನಾಯ್ಕ್ ಎಲ್ಲರು ಒಟ್ಟು ಸೇರಿ ನೂತನ ಕಚೇರಿಅಯನ್ನು ಉದ್ಘಾಟಿಸಿದರು.

ಈ ವೇಳೆ ಸಭೆಯನ್ನುದ್ದೇಶಿಸಿ ಮಾತನಾಡಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು, 2009ರಲ್ಲಿ ನಾನು ಪ್ರಥಮ ಬಾರಿಗೆ ಅಭ್ಯರ್ಥಿಯಾಗಿ ಆಶೀರ್ವಾದ ಮಾಡಿದ ಮತದಾರರು ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿ ಆಶೀರ್ವಾದ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮತದಾರರ ನಂಬಿಕೆಗೆ ಚ್ಯುತಿ ಬಾರದಂತೆ ರಾಜಕಾರಣ ಮಾಡಿದ್ದೇನೆ.ಇದೀಗ ಮೋದಿ ಅಲೆಯಲ್ಲ, ಸುನಾಮಿಯೇ ಎದ್ದಿದೆ ಪರಿಣಾಮವಾಗಿ ಇಲ್ಲಿ ಬಿಜೆಪಿ ಖಂಡಿತ ಜಯಸಾಧಿಸುತ್ತದೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದರು.

ಕಳೆದ 5ವರ್ಷದಲ್ಲಿ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಕಷ್ಟು ಉತ್ತಮ ಯೋಜನೆಗಳುಅನುಷ್ಠಾನಗೊಂಡಿದ್ದು, ದ.ಕ ಲೋಕ ಸಭಾ ಕ್ಷೇತ್ರದಲ್ಲಿ 16,500 ಕೋಟಿ ರೂಪಾಯಿಗಳ ಯೋಜನೆಗಳು ಅನುಷ್ಠಾನಗೊಂಡಿದೆ. 5 ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಪರಿಣಾಮವಾಗಿ ಇಲ್ಲಿ ಮೋದಿ ಅಲೆಯಲ್ಲ ಸುನಾಮಿಯ ರೀತಿಯ ಬೃಹತ್ ಅಲೆ ಎದ್ದಿದೆ, ಮತದಾರರು ಬಿಜೆಪಿ ಪರವಾಗಿದ್ದಾರೆ. 10 ವರ್ಷಗಳಲ್ಲಿ ಭ್ರಷ್ಟಾಚಾರ ರಹಿತವಾಗಿ ರಾಜಕಾರಣ ಮಾಡಿದ್ದೇನೆ ಎಂದು ನಳಿನ್ ಕುಮಾರ್ ಹೇಳಿದರು.

ರಾಷ್ಟದ ದೃಷ್ಟಿಯಿಂದ ಈ ಬಾರಿಯ ಚುನಾವಣೆ ಮಹತ್ವದ ಚುನಾವಣೆಯಾಗಿದೆ. ಮೋದಿ ತೆಗೆದುಕೊಂಡ ತೀರ್ಮಾನಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಈ ಬಾರಿ ಮೋದಿಯನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂದು ನಳಿನ್ ಕುಮಾರ್ ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಸಂಜೀವ ಮಟಂದೂರು ಸ್ವಾಗತಿಸಿದರು. ಸಮಾರಂಭದಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್, ದ.ಕ.ಜಿಲ್ಲೆಯ ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಉಮಾನಾಥ ಕೊಟ್ಯಾನ್, ಡಾ.ಭರತ್ ಶೆಟ್ಟಿ, ಅಂಗಾರ, ರಾಜೇಶ್ ನಾಯ್ಕ್, ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಕೃಷ್ಣಾ ಜೆ ಪಾಲೆಮಾರ್, ಬಿಜೆಪಿ ಮುಖಂಡರಾದ ಯೋಗೀಶ್ ಭಟ್, ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಭಾರತಿ ಶೆಟ್ಟಿ, ಉದಯ ಕುಮಾರ್ ಶೆಟ್ಟಿ ಗೊಪಾಲಕೃಷ್ಣ ಹೇರಳೆ, ಪ್ರಭಾಕರ ಬಂಗೇರ, ಮೋನಪ್ಪ ಭಂಡಾರಿ, ಗಣೇಶ್ ಕಾರ್ನಿಕ್ , ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೊಡು, ಉಪಾಧ್ಯಕ್ಷೆ ಕಸ್ತೂರಿ ಪಂಜ ಮೊದಲಾದವರು ಉಪಸ್ಥಿತರಿದ್ದರು.

Comments are closed.