ಕರಾವಳಿ

ಕಟೀಲು ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್

Pinterest LinkedIn Tumblr

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ನಾಮಪತ್ರ ಸಲ್ಲಿಸುವ ಮೊದಲು ಬೆಳಗ್ಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಮೂರನೇ ಬಾರಿಗೆ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಸ್ಫರ್ಧಿಸುವ ನಳಿನ್ ಕುಮಾರ್ ಕಟೀಲ್ ಪ್ರತೀ ಚುನಾವಣೆಯ ನಾಮಪತ್ರ ಸಲ್ಲಿಕೆಗೂ ಮುನ್ನ ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿದಾನಕ್ಕೆ ತೆರಳಿ ಪ್ರಾರ್ಥಿಸುತ್ತಾರೆ.

ಈ ವೇಳೆ ನಳಿನ್ ಕುಮಾರ್ ಕಟೀಲ್ ಅವರ ಜೊತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

Comments are closed.