ಕರಾವಳಿ

ನಾಪತ್ತೆಯಾದ ಮೀನುಗಾರರ ಕುಟುಂಬಸ್ಥರನ್ನು ಭೇಟಿಯಾಗಿ ಧೈರ್ಯ ತುಂಬಿದ ಕೇಂದ್ರ ರಕ್ಷಣಾ ಸಚಿವೆ!

Pinterest LinkedIn Tumblr

ಉಡುಪಿ: ಉಡುಪಿಗೆ ಮಂಗಳವಾರ ದಿನದಂದು ಆಗಮಿಸಿದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇತ್ತೀಚಿಗೆ ಉಡುಪಿಯ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ ಮೀನುಗಾರರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಸುವರ್ಣ ತ್ರಿಭುಜ ಬೋಟ್ ಮಾಲೀಕ ಚಂದ್ರಶೇಖರ್ ಕೋಟ್ಯಾನ್ ಅವರ ಮನೆಗೆ ಮೊದಲು ಭೇಟಿ ನೀಡಿದ ಸಚಿವೆ ಬಳಿಕ ದಾಮೋದರ್ ಸಾಲ್ಯಾನ್ ಅವರ ಮನೆಗೆ ಭೇಟಿ ಕೊಟ್ಟು ಧೈರ್ಯ ಹೇಳಿದರು. ಈ ವೇಳೆ ಮಾತನಾಡಿದ ಸಚಿವರು, ನಾಪತ್ತೆಯಾದ ಹಡಗು ಮತ್ತು ಮೀನುಗಾರರ ಪತ್ತೆಗೆ ಕೇಂದ್ರ ಸರಕಾರ ಯಾವ ರೀತಿಯ ಕ್ರಮ ಕೈಗೊಂಡಿದೆ ಮತ್ತು ಭಾರತೀಯ ನೌಕಾಪಡೆ ಯಾವ ರೀತಿ ಸಹಾಯ ಮಾಡಿದೆ ಎಂಬುದರ ಬಗ್ಗೆ ಮಾಹಿತಿ ನೀಡಿದರು. ಮುಂದೆಯೂ ಇದೇ ರೀತಿ ಪತ್ತೆ ಕಾರ್ಯಕ್ಕೆ ಹೆಚ್ಚಿನ ವ್ಯವಸ್ಥೆ ಮಾಡುವ ಭರವಸೆ ನೀಡಿದ ರಕ್ಷಣಾ ಸಚಿವರು ಮನೆಯವರಿಗೆ ಸಾಂತ್ವಾನ ಹೇಳಿದರು.

ಈ‌ ಸಂದರ್ಭದಲ್ಲಿ ಉಡುಪಿ ಶಾಸಕರಾದ ಕೆ ರಘುಪತಿ ಭಟ್, ಮತ್ತು ಸಂಸದೆ ಶೋಭಾ ಕರಂದ್ಲಾಜೆ, ಲಾಲಾಜಿ ಆರ್.ಮೆಂಡನ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ಉಪಸ್ಥಿತರಿದ್ದರು.

Comments are closed.