ಕರಾವಳಿ

ಐಪಿಎಲ್ ಬೆಟ್ಟಿಂಗ್‌ ನಡೆಸುತ್ತಿದ್ದ ಮೂವರ ಬಂಧನ :ರೂ.62,700 ನಗದು ವಶ

Pinterest LinkedIn Tumblr

ಮಂಗಳೂರು, ಮಾರ್ಚ್.26: ಐಪಿಎಲ್ ಬೆಟ್ಟಿಂಗ್‌ನಲ್ಲಿ ತೊಡಗಿಕೊಳ್ಳದಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಅವರು ಐಪಿಎಲ್ ಆರಂಭಕ್ಕೂ ಮುನ್ನ ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಇದೀಗ ನಗರದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಲ್ಲಿ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ

ಬಂಧಿತ ಆರೋಪಿಗಳನ್ನು ಪ್ರತಿಷ್ಠಿತ ಕಂಪನಿಯೊಂದರ ಮಾರುಕಟ್ಟೆ ಮುಖ್ಯಸ್ಥ ಬಾನುಕೇಶ್, ಸ್ಥಳೀಯರಾದ ಅನಿಲ್ ಹಾಗೂ ಜೇಮ್ಸ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ರೂ.62,700 ನಗದು, ನಾಲ್ಕು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಆನ್‌ಲೈನ್ ಮೂಲಕ ಐಪಿಲ್ ಕ್ರಿಕೇಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಐಪಿಎಲ್ ಆರಂಭಕ್ಕೂ ಮುನ್ನ ಐಪಿಎಲ್ ಬೆಟ್ಟಿಂಗ್‌ನಲ್ಲಿ ತೊಡಗಿಕೊಳ್ಳದಂತೆ ಟ್ವಿಟರ್ ಮೂಲಕ ಎಚ್ಚರಿಕೆ ನೀಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಅವರು ಬೆಟ್ಟಿಂಗ್ ನಲ್ಲಿ ಪಾಲ್ಗೊಳ್ಳುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದರು.

ಕಮಿಷನರ್ ಸಂದೀಪ್ ಪಾಟೀಲ್ ಅವರು ಮಾರ್ಚ್ ೨೨ರಂದು ಟ್ವಿಟರ್ ಮೂಲಕ ಬೆಟ್ಟಿಂಗ್ ನಡೆಸುವ ಬುಕ್ಕಿಗಳಿಗೆ ಮುನ್ನೆಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಮಾತ್ರವಲ್ಲದೇ ತಮ್ಮ ಟ್ವೀಟ್‌ನ್ನು ಶೇರ್ ಮಾಡುವ ಮೂಲಕ ಸಾರ್ವಜನಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದವರು ಟ್ವೀಟ್‌‌ಗರಲ್ಲಿ ಮನವಿ ಮಾಡಿದ್ದರು.

Comments are closed.