ಕರಾವಳಿ

ತುಂಬೆ ಡ್ಯಾಂ ಒಳ ಹರಿವು ಸ್ಥಗಿತ : ನಳ್ಳಿ ನೀರನ್ನು ಮಿತವಾಗಿ ಬಳಸುವಂತೆ ಮನಪಾ ಮನವಿ

Pinterest LinkedIn Tumblr

ಮಂಗಳೂರು, ಮಾರ್ಚ್. 27 : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಕುಡಿಯುವ ನೀರನ್ನು ನೇತ್ರಾವತಿ ನದಿಯಿಂದ ಪೂರೈಕೆ ಮಾಡಲಾಗುತ್ತಿದ್ದು ಪ್ರಸ್ತುತ ದಿನಗಳಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಒಳ ಹರಿವು ಸಂಪೂರ್ಣ ಸ್ಥಗಿತಗೊಂಡಿದೆ.

ಈ ಹಿನ್ನೆಲೆಯಲ್ಲಿ, ಪ್ರಸ್ತುತ ತುಂಬೆ ಡ್ಯಾಂ ನಲ್ಲಿ ಲಭ್ಯವಿರುವ ನೀರನ್ನು ಮುಂದಿನ ಎಪ್ರಿಲ್ ಮೇ ತಿಂಗಳು ಹಾಗೂ ಮಳೆ ಬರುವವರೆಗೆ ಪೂರೈಕೆ ಮಾಡಬೇಕಾಗಿರುವುದರಿಂದ ಮುಂದಿನ ದಿನಗಳಲ್ಲಿ ನೀರಿನ ಕೊರತೆಯನ್ನು ನಿಭಾಯಿಸಲು ಅನುಕೂಲವಾಗುವಂತೆ ಸಾರ್ವಜನಿಕರು ತಮ್ಮ ಮನೆಗಳಲ್ಲಿನ ಕೈತೋಟಗಳಿಗೆ, ವಾಹನ ತೊಳೆಯಲು, ಇನ್ನಿತರ ಕೆಲಸಗಳಿಗೆ ಕುಡಿಯುವ ನೀರನ್ನು ಬಳಸಬಾರದು ಹಾಗೂ ನೀರನ್ನು ಪೋಲು ಮಾಡದೆ ಮಿತವಾಗಿ ಬಳಸತಕ್ಕದ್ದು.

ಅದರಂತೆ ನಗರಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ರಚನೆ ಕಾಮಗಾರಿಗಳಿಗೆ ತೆಗೆದುಕೊಂಡ ನಳ್ಳಿ ನೀರಿನ ಸಂಪರ್ಕಗಳನ್ನು ಈ ಕೂಡಲೇ ಕಡಿತಗೊಳಿಸಿಕೊಂಡು ಮಹಾನಗರಪಾಲಿಕೆಯೊಂದಿಗೆ ಸಹಕರಿಸಲು ಆಯುಕ್ತರು ಮಹಾನಗರಪಾಲಿಕೆ, ಮಂಗಳೂರು ಇವರ ಪ್ರಕಟನೆ ತಿಳಿಸಿದೆ.

Comments are closed.