ಕರಾವಳಿ

ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಯವರಿಂದ ಕದ್ರಿ ದೇಗುಲದಲ್ಲಿ ವಿಶೇಷ ಪೂಜೆ

Pinterest LinkedIn Tumblr

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಯವರು ಸೋಮವಾರ ಬೆಳಗ್ಗೆ ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಈ ಸಂದರ್ಭ ಕದ್ರಿ ಶ್ರೀ ಮಂಜುನಾಥೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ತಮ್ಮ ಗೆಲುವಿಗಾಗಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಅವರೊಂದಿಗೆ ಮಾಜಿ ಶಾಸಕ ಜೆ.ಆರ್.ಲೋಬೋ, ಮಾಜಿ ಕಾರ್ಪೋರೇಟರ್ ಅಶೋಕ್ ಡಿ.ಕೆ, ಪಕ್ಷದ ಪ್ರಮುಖರಾದ ಟಿ.ಕೆ.ಸುಧೀರ್, ಸುರೇಶ್ ಕದ್ರಿ, ವಿಶ್ವಾಸ್ ಕುಮಾರ್ ದಾಸ್, ಚಂದ್ರಕಲಾ, ಭಾರತಿ, ಗೋಪಾಲ್ ಶೆಟ್ಟಿ, ರಾಜೇಶ್ ಬೆಂಗರೆ, ಸಮರ್ಥ ಭಟ್, ಶಾಂತಳಾ ಗಟ್ಟಿ , ನಿಶಾಂತ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Comments are closed.