ಕರಾವಳಿ

ಮಂಗಳೂರು ಸಮುದ್ರ ಕಿನಾರೆಯಲ್ಲಿ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಇಬ್ಬರು ಬುಕ್ಕಿಗಳ ಬಂಧನ

Pinterest LinkedIn Tumblr

ಮಂಗಳೂರು, ಮಾರ್ಚ್.30: ಮಂಗಳೂರಿನ ಸಮುದ್ರ ಕಿನಾರೆಯಲ್ಲಿ ಮೊಬೈಲ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪಣಂಬೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕುಳಾಯಿ ನಿವಾಸಿ ಭರತೇಶ್ ಎಸ್. ಶ್ರೀಯಾನ್ (38) ಹಾಗೂ ಕದ್ರಿ ನಿವಾಸಿ ಮಹಾಂತೇಶ್ ಅಮೀನ್ (38) ಎಂದು ಗುರುತಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪಣಂಬೂರು ಸರಹದ್ದಿನ ಮೀನಕಳಿಯ ಸಮುದ್ರ ಕಿನಾರೆಯಲ್ಲಿ ನವಜ್ಯೋತಿ ಯುವಕ ವೃಂದದ ಹಿಂಭಾಗ ಸಮುದ್ರ ಕಿನಾರೆಯಲ್ಲಿ ಭರತೇಶ್ ಎಸ್. ಶ್ರೀಯಾನ್ ಮತ್ತು ಮಹಂತೇಶ್ ಅಮೀನ್ ಎಂಬವರು Brizze Sport ಮತ್ತು Delight ಎಂಬ Mobile App ನಲ್ಲಿ ಪಾಕಿಸ್ತಾನ ಮತ್ತು ಆಸ್ಟೇಲಿಯಾ ನಡುವೆ ಅಬುದಾಬಿಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಏಕದಿನ ಕ್ರಿಕೇಟ್ ಪಂದ್ಯಕ್ಕೆ ಸಂಬಂಧಪಟ್ಟು ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಾ ಕ್ರಿಕೇಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿದ್ದರು.

ಇವರುಗಳಿಂದ ಹಣ ಸಂಗ್ರಹ ಮಾಡಲು ಬೇರೆ ವ್ಯಕ್ತಿಯು ಬರುತ್ತಿರುವುದಾಗಿ ಮಂಗಳೂರು ನಗರ ಉತ್ತರ ಉಪವಿಭಾಗ ರೌಡಿ ನಿಗ್ರಹ ದಳದ ಪೊಲೀಸ್ ಉಪ ನಿರೀಕ್ಷಕರಾದ ಶ್ರೀ ಶೀತಲ್ ಅಲಗೂರು ಮತ್ತು ಅವರ ತಂಡಕ್ಕೆ ದೊರೆತ ಖಚಿತ ವರ್ತಮಾನದಂತೆ ದಾಳಿ ನಡೆಸಿ ಕ್ರಿಕೇಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಅಕ್ರಮ ದಂಧೆಗೆ ಉಪಯೋಗಿಸುತ್ತಿದ್ದ 43 ಸಾವಿರ ಮೌಲ್ಯದ ಮೂರು ಮೊಬೈಲ್, ಸಾರ್ಜನಿಕರಿಂದ ಅಕ್ರಮ ಬೆಟ್ಟಿಂಗ್ ದಂಧೆಗೆ ಸಂಗ್ರಹಿಸಿದ್ದ ನಗದನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಕ್ಕೆ ಪಡೆದ ಸೊತ್ತುಗಳ ಮೌಲ್ಯ 68 ಸಾವಿರ ರೂ. ಎಂದು ಅಂದಾಜಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನಿರ್ದೇಶನದಂತೆ ಡಿಸಿಪಿಗಳಾದ ಹನುಮಂತರಾಯ ಮತ್ತು ಉಮಾ ಪ್ರಶಾಂತ್ ಮಾರ್ಗದರ್ಶನದಂತೆ ಮಂಗಳೂರು ನಗರ ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ್ ಆರ್. ಗೌಡ ನೇತೃತ್ವದಲ್ಲಿ ಪಣಂಬೂರು ಪೊಲೀಸ್ ನಿರೀಕ್ಷಕ ಕೆ.ಸತ್ಯನಾರಾಯಣ, ಮಂಗಳೂರು ಉತ್ತರ ಉಪವಿಭಾಗ ರೌಡಿ ನಿಗ್ರಹದಳದ ಪೊಲೀಸ್ ಉಪನಿರೀಕ್ಷಕ ಶೀತಲ್ ಅಲಗೂರು, ರೌಡಿ ನಿಗ್ರಹದಳದ ಎಎಸ್‌ಐ ಮುಹಮ್ಮದ್, ಕುಶಲ ಮಣಿಯಾಣಿ, ಸತೀಶ್ ಎಂ., ವಿಜಯ ಕಾಂಚನ್, ಇಸಾಕ್, ಶರಣ್ ಕಾಳಿ ಭಾಗವಹಿಸಿದ್ದರು. ಈ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.