ಕರಾವಳಿ

ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಮಿಥುನ್ ರೈಯವರ ಚುನಾವಣಾ ಕಾರ್ಯಾಲಯ ಉದ್ಘಾಟನೆ

Pinterest LinkedIn Tumblr

ಮಂಗಳೂರು, ಮಾರ್ಚ್.31: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ತಮ್ಮ ಅಭ್ಯರ್ಥಿಯ ಚುನಾವಣಾ ಕಾರ್ಯಾಲಯವು ನಗರದ ಕಂಕನಾಡಿ ಸಮೀಪದ ಬೆಂದೂರ್‌ವೆಲ್ ಬಳಿ ಆರಂಭಿಸಿದ್ದು, ರವಿವಾರ ಹಿಂದೂ,ಕ್ರೈಸ್ತ,ಮುಸ್ಲೀ ಈ ಮೂರು ಧರ್ಮಗಳ ಆರಾಧಕರು ನೂತನ ಕಾರ್ಯಾಲಯವನ್ನು ಉದ್ಘಾಟಿಸಿದರು.

ಬೋಳಾರದ ಹಳೆಕೋಟೆ ಮುಖ್ಯಪ್ರಾಣ ದೇವಸ್ಥಾನದ ಪ್ರಧಾನ ಅರ್ಚಕ ಗುರುಪ್ರಸಾದ್ ಭಟ್, ಕಂಕನಾಡಿಯ ರಹ್ಮಾನಿಯಾ ಜುಮಾ ಮಸೀದಿಯ ಖತೀಬ್ ಅಬ್ದುರ್ರಹ್ಮಾನ್ ಸಅದಿ, ರೋಝಾರಿಯಾ ಕೆಥಡ್ರಾಲ್ ಚರ್ಚ್‌ನ ಪ್ರಧಾನ ಧರ್ಮಗುರು ಫಾ. ಜೆ.ಬಿ.ಕ್ರಾಸ್ತಾ ಜಂಟಿಯಾಗಿ ಕಾರ್ಯಾಲಯವನ್ನು ಉದ್ಘಾಟಿಸಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಮಿಥುನ್ ರೈಯವರಿಗೆ ಆಶೀರ್ವದಿಸಿದರು.

ಬಳಿಕ ನಡೆದ ಸಭಾಕಾರ್ಯಕ್ರಮವನ್ನುದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್-ಜೆಡಿಎಸ್ ಜಂಟಿ ಚುನಾವಣಾ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಸಚಿವ ರಮಾನಾಥ ರೈ, ಪಕ್ಷದ ಅಭ್ಯರ್ಥಿ ಮಿಥುನ್ ರೈ, ಜೆಡಿಎಸ್ ಪ್ರಮುಖ ಧನರಾಜ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಮೊಯ್ದಿನ್ ಬಾವಾ, ಶಕುಂತಳಾ ಶೆಟ್ಟಿ, ಕೆ.ಎಸ್.ಮುಹಮ್ಮದ್ ಮಸೂದ್, ಎನ್.ಎಂ.ಅಡ್ಯಂತಾಯ, ಪಕ್ಷದ ಮುಖಂಡರಾದ ಕಳ್ಳಿಗೆ ತಾರನಾಥ ಶೆಟ್ಟಿ, ಟಿ.ಎಂ.ಶಹೀದ್, ಸುರೇಶ್ ಬಲ್ಲಾಳ್, ಬಲರಾಜ ರೈ, ಎ.ಸಿ.ಭಂಡಾರಿ, ತೇಜೋಮಯ, ಶಶಿಧರ್ ಹೆಗ್ಡೆ, ನವೀನ್ ಡಿ’ಸೋಜ, ಪುರುಷೋತ್ತಮ ಚಿತ್ರಾಪುರ, ಅಡ್ವಕೇಟ್ ಎ.ಸಿ.ಜಯರಾಜ್, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಮಮತಾ ಗಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೇಟ್ ಪಿಂಟೋ  ಮತ್ತಿತರರು ಪಾಲ್ಗೊಂಡಿದ್ದರು.

Comments are closed.