ಕರಾವಳಿ

ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕೈ ಬಲಪಡಿಸಲು ಮಂಗಳೂರಿಗೆ ಆಗಮಿಸಿದ ಸಚಿವ ಡಿ.ಕೆ ಶಿವಕುಮಾರ್

Pinterest LinkedIn Tumblr

ಮಂಗಳೂರು : ಕಾಂಗ್ರೆಸ್ ದ.ಕ.ಲೋಕಸಭಾ ಅಭ್ಯರ್ಥಿ, ಯುವ ನಾಯಕ ಮಿಥುನ್ ರೈ ಅವರ ಪರ ದ.ಕ.ಜಿಲ್ಲೆಯಲ್ಲಿ ಪ್ರಚಾರ ಮಾಡುವ ಮೂಲಕ ಮಿಥುನ್ ರೈ ಕೈ ಬಲಪಡಿಸಲು ತಾನು ಮಂಗಳೂರಿಗೆ ಆಗಮಿಸಿರುವುದಾಗಿ ಮಿಥುನ್ ರೈ ಅಪ್ತರೂ ಆಗಿರುವ ಕರ್ನಾಟಕದ ಪ್ರಭಾವಿ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಚುನಾವಣಾ ಪ್ರಚಾರಕ್ಕಾಗಿ ಸೋಮವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬಂದಿಳಿದ ಅವರು ಸುದ್ಧಿಗಾರರ ಜೊತೆ ಮಾತನಾಡಿದರು. ಮಂಗಳೂರಿನ ಜನತೆ ಬದಲಾವಣೆ ಬಯಸಿದ್ದಾರೆ.ಕರಾವಳಿಯ ಜನತೆ ಬದಲಾವಣೆ ಬಯಸಿದ್ದನ್ನು ನಾವು ಗುರುತಿಸಿದ್ದೇವೆ. ಇದನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಈ ಬಾರಿ ಹೊಸ ಅಭ್ಯರ್ಥಿಗೆ ಟಿಕೆಟ್ ನೀಡಿದೆ, ನಮ್ಮ ಅಭ್ಯರ್ಥಿ, ಯುವ ನಾಯಕ ಮಿಥುನ್ ರೈ ಗೆ ಶಕ್ತಿ ತುಂಬಲು ತಾನು ಬಂದಿರುವುದಾಗಿ ಅವರು ಹೇಳಿದರು.

ಕಾಂಗ್ರೆಸ್ ಪಕ್ಷ ಸಮರ್ಥ ಅಭ್ಯರ್ಥಿ ಮಿಥುನ್ ರೈ ಅವರನ್ನು ಆಯ್ಕೆ ಮಾಡಿದೆ.ಮಿಥುನ್ ರೈ ಅವರು ಈ ಬಾರಿಯ ಚುನಾವಣೆಯಲ್ಲಿ ಖಂಡಿತ ಗೆಲ್ಲುತ್ತಾರೆ ಎಂಬ ವಿಶ್ವಾಸ ನಮಗಿದೆ. ಹಾಗಾಗಿ ಅವರು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಬೇಕೆಂದು ಮಿಥುನ್ ರೈ ಅವರ ಪರ ಪ್ರಚಾರ ನಡೆಸಲು ಬಂಧಿರುವುದಾಗಿ ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದರು.

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಅಭ್ಯರ್ಥಿ ಮಿಥುನ್ ರೈ ,ಮಾಜಿ ಶಾಸಕ ಜೆ.ಆರ್ ಲೋಬೋ ಮತ್ತಿತ್ತರ ನಾಯಕರು ಸ್ವಾಗತಿಸಿ, ಬರಮಾಡಿಕೊಂಡರು.

Comments are closed.