ಕರಾವಳಿ

ಜೆಡಿಎಸ್ ಕುತಂತ್ರಕ್ಕೆ ಧರ್ಮಸ್ಥಳ ಶ್ರೀ ಮಂಜುನಾಥನ ಮೊರೆಹೋದ ಮಂಡ್ಯ ಪಕ್ಷೇತರ ಅಭ್ಯರ್ಥಿ ಎ.ಸುಮಲತಾ ಅಂಬರೀಷ್

Pinterest LinkedIn Tumblr

ಮಂಗಳೂರು, ಏಪ್ರಿಲ್.01 : ಪ್ರಥಮ ಬಾರಿಗೆ ಚುನಾವಣಾ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಪಕ್ಷೇತರ ಅಭ್ಯರ್ಥಿ ಎ.ಸುಮಲತಾ ಅಂಬರೀಶ್ ಅವರು ಸೋಮವಾರ ಬೆಳಗ್ಗೆ ದ.ಕ.ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಇಂದು ಮುಂಜಾನೆ 5 ಗಂಟೆಗೆ ಧರ್ಮಸ್ಥಳಕ್ಕೆ ಆಗಮಿಸಿದ ಸುಮಲತಾ ಅಂಬರೀಶ್ ಅತಿಥಿ ಗೃಹದಲ್ಲಿ ಕೊಂಚ ವಿಶ್ರಾಂತಿ ಪಡೆದು ಬಳಿಕ 10:30 ವೇಳೆ ಶ್ರೀ ಮಂಜುನಾಥ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಆ ಬಳಿಕ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜತೆ ಮಾತುಕತೆ ನಡೆಸಿದರು. ಸುಮಲತಾ ಅಂಬರೀಷ್ ಧರ್ಮಸ್ಥಳ ಭೇಟಿ ವೇಳೆ ಚಿತ್ರ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹಾಗೂ ಹಿರಿಯ ನಟ ದೊಡ್ಡಣ್ಣ ಜತೆಗಿದ್ದರು.

ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರ ದಿನದಿಂದ ದಿನಕ್ಕೆ ಹಲವಾರು ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಮಂಡ್ಯದಲ್ಲಿ ನಡೆಯಲಿರುವ ಹೈ ವೊಲ್ಟೇಜ್ ಕದನಕ್ಕೆ ದಿನಗಣನೆ ಆರಂಭವಾಗಿದೆ. ಕ್ಷೇತ್ರದಲ್ಲಿ ಗೆಲುವಿಗಾಗಿ ರಾಜಕೀಯ ತಂತ್ರ ಮತ್ತು ಪ್ರತಿತಂತ್ರ ಜೊತೆಗೆ ಕುತಂತ್ರಗಳು ನಡೆಯುತ್ತಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ಮತದಾರರ ಓಲೈಕೆಗೆ ಜೆಡಿಎಸ್ ನಾನಾ ಕಸರತ್ತು ಗಳನ್ನು ರಾಜಕೀಯ ಪಟ್ಟುಗಳನ್ನು ಅನುಸರಿಸುತ್ತಿದೆ ಎನ್ನಲಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಮಣಿಸಲು ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಕೂಟ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿರುವ ಬೆನ್ನಲ್ಲೇ ಸುಮಲತಾ ಅವರು ಧರ್ಮಸ್ಥಳ ಮಂಜುನಾಥನ ಮೊರೆ ಹೋಗಿದ್ದಾರೆ. ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಸುಮಲತಾ ಅಂಬರೀಶ್ ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ, ಕೆಲಹೊತ್ತು ಮಾತುಕತೆ ನಡೆಸಿ ಮಂಡ್ಯದತ್ತ ಪ್ರಯಾಣ ಬೆಳೆಸಿದರು.

Comments are closed.