ಕರಾವಳಿ

ವಾಹನ ಕಳವು ಪ್ರಕರಣ : ಆರು ಲಕ್ಷ ಮೌಲ್ಯದ ವಾಹನ ಸಹಿತಾ ಆರೋಪಿ ಸೆರೆ – ಇನ್ನಿಬ್ಬರಿಗಾಗಿ ಶೋಧ

Pinterest LinkedIn Tumblr

ಮಂಗಳೂರು, ಎಪ್ರಿಲ್.02: ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿ ಕಳವು ಮಾಡಲಾದ ಸುಮಾರು 6,00,000 ರೂ. ಮೌಲ್ಯದ 407 ಟೆಂಫೋವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ನಿವಾಸಿ ಕಿಶೋರ್ ಕುಮಾರ್ ಎನ್ ವಿ (26) ಬಂಧಿತ ಆರೋಪಿ.

ದಿನಾಂಕ 07-02-2018 ರಂದು ಬೆಳಿಗ್ಗೆ 07-30 ಗಂಟೆಯ ನಡುವೆ ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ(ರಿ) ರವರಿಗೆ ಸೇರಿದ ಕೆಎ-19-ಎಎ-5685 ನೇ 407 ಟೆಂಪೋ ದಕ್ಷಿಣ ಧಕ್ಕೆಯ ಮತ್ಸ್ಯಾ ಗಂಧಿ ಐಸ್ ಪ್ಲಾಟ್ ಮತ್ತು ಕೋಲ್ಡ್ ಸ್ಟೋರೆಜ್ ಎದುರು ನಿಲ್ಲಿಸಿದನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಮಂಗಳೂರು ದಕ್ಷಿಣ ಪೊಲಿಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿದ್ದರು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ದಿನಾಂಕ 01-04-2019 ರಂದು ಆರೊಪಿಯನ್ನು ವಶಕ್ಕೆ ಪಡೆದುಕೊಂಡು, ಆರೋಪಿಯ ವಶದಲ್ಲಿದ್ದ ಸುಮಾರು 6,00,000 ರೂ. ಮೌಲ್ಯದ 407 ಟೆಂಪೋವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ, ಪ್ರಕರಣದಕ್ಕೆ ಸಂಬಂಧಪಟ್ಟಂತೆ ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು ಅವರಗಳ ಶೋಧಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ರವರ ನಿರ್ದೇಶನದಲ್ಲಿ ಉಪ ಪೊಲೀಸ್ ಆಯುಕ್ತರಾದ (ಕಾನೂನು ಮತ್ತು ಸುವ್ಯವಸ್ಥೆ) ಹನುಮಂತರಾಯ, ಹಾಗೂ ಉಪ ಪೊಲೀಸ್ ಆಯುಕ್ತರಾದ (ಅಪರಾಧ ಮತ್ತು ಸಂಚಾರ) ಶ್ರೀಮತಿ ಉಮಾಪ್ರಶಾಂತ್, ಮಂಗಳೂರು ಕೇಂದ್ರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಸುಧೀರ್ ಹೆಗ್ಡೆ ಇವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಕುಮಾರಾರಧ್ಯ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಕಾನೂನು ಸುವ್ಯವಸ್ಥೆಯ ಪೊಲೀಸ್ ಉಪ ನಿರೀಕ್ಷಕರಾದ ರಾಜೇಂದ್ರ, ಅಪರಾಧ ಪತ್ತೆ ವಿಭಾಗದ ಪೊಲೀಸ್ ಉಪನಿರೀಕ್ಷಕರಾದ ಮಂಜುಳಾ.ಎಲ್ ಹಾಗೂ ಠಾಣಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Comments are closed.