ಕರಾವಳಿ

ಬಿಜೆಪಿ ಅಭ್ಯರ್ಥಿ ನಳೀನ್ ಕುಮಾರ್ ಕಟೀಲ್ ಜಿಲ್ಲೆಯ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ

Pinterest LinkedIn Tumblr

ಮಂಗಳೂರು : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳೀನ್ ಕುಮಾರ್ ಕಟೀಲ್ ಅವರು ಕಳೆದೆರಡು ದಿನಗಳಿಂದ ದ.ಕ.ಜಿಲ್ಲೆಯ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳೀನ್ ಕುಮಾರ್ ಕಟೀಲ್ ಅವರು ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ವಿವಿಧ ದೇವಾಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇದೇ ವೇಳೆ ನಳಿನ್ ಕುಮಾರ್ ಅವರು ಮೂಡಬಿದ್ರೆ ಜೈನ ಬಸದಿಗೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡಕೊಂಡರು.

ಈ ವೇಳೆ ನಳೀನ್ ಕುಮಾರ್ ಕಟೀಲ್ ಅವರ ಜೊತೆಗೆ ಕ್ಷೇತ್ರದ ಶಾಸಕರಾದ ಉಮನಾಥ್ ಕೋಟ್ಯಾನ್,ಅಧ್ಯಕ್ಷರಾದ ಈಶ್ವರ್ ಕಟೀಲ್ , ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತುರಿ ಪಂಜ, ಜಗದೀಶ್ ಅಧಿಕಾರಿ, ರಾಮಚಂದ್ರ ಬೈಕಪಾಡಿ ಜಿಲ್ಲಾ ಕಾರ್ಯದರ್ಶಿ ಸುದರ್ಶನ್ ಮೂಡಬಿದ್ರೆ, ಮಂಡಲ ಕಾರ್ಯದರ್ಶಿ ಸುಕೇಶ್ ಮೂಡಬಿದ್ರೆ, ಹಾಗೂ ಪ್ರಮುಖರು ಇದ್ದರು.

ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ದರೆಗುಡ್ಡೆ ಗ್ರಾಮದಲ್ಲಿರುವ ದರೆಗುಡ್ಡೆ ವಿಠ್ಠಲ ದೇವಸ್ಥಾನಕ್ಕೆ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್,ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ದ.ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುದರ್ಶನ್, ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅದಿಕಾರಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಕಸ್ತೂರಿ ಪಂಜ, ಮುಲ್ಕಿ ಮೂಡಬಿದ್ರೆ ಕ್ಷೇತ್ರ ಬಿಜೆಪಿ ಮಂಡಲಾಧ್ಯಕ್ಷ ಈಶ್ವರ್ ಕಟೀಲ್, ಮುಲ್ಕಿ ಮೂಡದಿದ್ರೆ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಇನ್ನಿತರ ಮುಖಂಡರು ಹಾಗೂ ಕಾರ್ಯಕರ್ತರು ಜೊತೆಗಿದ್ದರು.

ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳೀನ್ ಕುಮಾರ್ ಕಟೀಲ್ ಅವರು ಶ್ರೀ ಕ್ಷೇತ್ರ ಕರೀಂಜೆ ದೇವಾಸ್ಥನಕ್ಕೆ ಭೇಟಿ ನೀಡಿ ಕರಿಂಜೆ ಶ್ರೀ ಶ್ರೀ ಮುಕ್ತನಂದ ಸ್ವಾಮೀಜಿಯವರನ್ನು ಭೇಟಿ ನೀಡಿ ಆರ್ಶಿವಾದ ಪಡೆದರು. ಈ ವೇಳೆ ಶಾಸಕರಾದ ಉಮನಾಥ್ ಕೋಟ್ಯಾನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Comments are closed.